Advertisement
ಎಪಿಎಂಸಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಇದ್ದರೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎಸ್.ಕುಮಾರ್ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದೇನಿದ್ದರೂ ಜೆಡಿಎಸ್ಸೇ ಅಧಿಕಾರ ಗದ್ದುಗೆ ಹಿಡಿಯಲಿದ್ದು, ಜನಪರ ಕಾರ್ಯಕ್ರಮಗಳು ಮುಂದುವರಿಯಲಿದೆ ಎಂದರು.
Related Articles
Advertisement
ಅಭ್ಯರ್ಥಿ ಬಗ್ಗೆ ಗೊಂದಲ ಬೇಡ: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಯಾರಾಗುತ್ತಾರೆ ಎಂಬ ಗೊಂದಲ ಬೇಡ. ಹೈಕಮಾಂಡ್ ಸೂಚಿಸುವ ಅಭ್ಯರ್ಥಿಯನ್ನೇ ಕಣಕ್ಕೆ ಇಳಿಸಲಾಗುವುದು ಎಂದರು. ಕಾರ್ಯಕರ್ತರು ಧೃತಿಗೆಡಬಾರದು. ಪಕ್ಷವನ್ನು ಬಲಪಡಿಸುವ ಕೆಲಸದಲ್ಲಿ ನಿರತರಾಗಬೇಕು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ. ನಾವೆಲ್ಲ ಸೇರಿ ಕುಮಾರಸ್ವಾಮಿ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿಸುವ ಪಣ ತೊಡೋಣ ಎಂದರು.
ಶಾಸಕ ಎಸ್.ಚಿಕ್ಕಮಾದು ಮಾತನಾಡಿ, ಬೇರುಮಟ್ಟದಲ್ಲಿರುವ ಪಕ್ಷವನ್ನು ಯಾರೂ ಅಲ್ಲಾಡಿಸಲಾಗದು. ನಾವೆಲ್ಲರೂ ಒಗ್ಗಟ್ಟಾಗಿ ದುಡಿದು ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತರೋಣ ಎಂದರು. ಎಪಿಎಂಸಿ ಅಧ್ಯಕ್ಷ ನಾಗಮಂಗಲ ಕುಮಾರ್, ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಎಚ್.ಮಹದೇವ್, ಜಿಪಂ ಮಾಜಿ ಸದಸ್ಯ ಫಜಲುಲ್ಲಾ, ನಗರಸಭೆ ಸದಸ್ಯರು, ಎಪಿಎಂಸಿ ಸದಸ್ಯರು ಮತ್ತಿತರರು ಹಾಜರಿದ್ದರು.