Advertisement

ಮದ್ಯ ವರ್ಜನ ಶಿಬಿರ ಸಮಾರೋಪ

06:13 PM Dec 06, 2021 | Team Udayavani |

ಹಾವೇರಿ: ತಾಲೂಕಿನ ಅಗಡಿ ಗ್ರಾಮದ ಪೇಟೆ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಏರ್ಪಡಿಸಿದ್ದ 1484ನೇ ಮದ್ಯ ವರ್ಜನ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

Advertisement

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಚಿವ ಬಸವರಾಜ ಶಿವಣ್ಣನವರ, ಸರ್ಕಾರದಿಂದ ಕೈಗೊಳ್ಳಲಾಗದ ಹಲವಾರು ಸಮಾಜಮುಖೀ ಯೋಜನೆಗಳನ್ನು ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಕೈಗೆತ್ತಿಕೊಳ್ಳುತ್ತಿದ್ದಾರೆ. ಇಂತಹ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಿದ್ದು,ದುಶ್ಚಟಗಳು ಬೀರುವ ದುಷ್ಪರಿಣಾಮದ ಬಗ್ಗೆ ತಿಳಿವಳಿಕೆ ನೀಡುವ ಕೆಲಸ ನಿರಂತರವಾಗಿ
ನಡೆಯಬೇಕಾಗಿದೆ ಎಂದರು.

ಸಮಾರಂಭದಲ್ಲಿ ಪ್ರಭುಸ್ವಾಮಿ ಮಠದ ಗುರುಸಿದ್ದ ಸ್ವಾಮೀಜಿ, ಅಗಡಿ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ, ಗದಗಿನ ತೋಂಟದಾರ್ಯಮಠದ ಮಹಾಂತ ಸ್ವಾಮೀಜಿ ಅವರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ಮದ್ಯವರ್ಜನಾ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿಜಲಿಂಗಪ್ಪ ಬಸೇಗಣ್ಣಿ, ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಮುತ್ತಣ್ಣ ಯಲಿಗಾರ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ, ಧಾರವಾಡ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕರಾದ ಬಸವರಾಜ ಅರಬಗೊಂಡ, ಜನಜಾಗೃತಿ ವೇದಿಕೆ ಸದಸ್ಯ ಪ್ರಕಾಶ ಶೆಟ್ಟಿ, ಸಾಹಿತಿ ಹನುಮಂತಗೌಡ ಗೊಲ್ಲರ, ಅಗಡಿ ಗ್ರಾಪಂ ಅಧ್ಯಕ್ಷೆ ಸಂಗೀತಾ ಇತರರು ಇದ್ದರು.

ಕಾರ್ಯಕ್ರಮದ ಮೂಲಕ 54 ಜನ ವ್ಯಸನಿಗಳು ಪಾನಮುಕ್ತ ಜೀವನ ನಡೆಸಲು ಪಣತೊಟ್ಟರು. ಜನಜಾಗೃತಿ ವಿಭಾಗದ ಯೋಜನಾಧಿಕಾರಿ ನಾಗೇಶ್‌ ನಿರೂಪಿಸಿದರು. ಯೋಜನಾಧಿಕಾರಿ ನಾರಾಯಣ.ಜಿ ಸ್ವಾಗತಿಸಿ, ಮೇಲ್ವಿಚಾರಕ ಬಸಪ್ಪ ವಂದಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next