Advertisement

ಮಕ್ಕಳೊಂದಿಗೆ ಬಿಇಒ ಸಂವಾದ

06:24 PM Mar 05, 2021 | Team Udayavani |

ಚಳ್ಳಕೆರೆ: ಗಡಿಭಾಗದ ಶಾಲೆಗಳಲ್ಲಿ ಎಸ್‌ ಎಸ್‌ಎಲ್‌ಸಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಕರು ಹೆಚ್ಚು ಶ್ರಮವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿ ಕಾರಿ ಕೆ.ಎಸ್‌. ಸುರೇಶ್‌ ತಿಳಿಸಿದರು.

Advertisement

ತಾಲೂಕಿನ ಓಬಳಾಪುರ, ತಿಪ್ಪಾರೆಡ್ಡಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಟ್ಟಿಗೆ ಸಂವಾದ ನಡೆಸಿ ಮಾತನಾಡಿದರು. ಈಗತಾನೇ ಮಕ್ಕಳು ಕೋವಿಡ್‌-19 ಭಯದಿಂದ ಹೊರಬಂದಿದ್ದಾರೆ. ಮಕ್ಕಳಿಗೆ ನಿರಂತರವಾಗಿ ಸರ್ಕಾರದ ಹಲವಾರು ಯೋಜನೆಗಳ ಮೂಲಕ ಪಾಠಪ್ರಚನ ನಡೆಯುತ್ತಲೇ ಬಂದಿವೆ. ಇದರ ಜೊತೆಲ್ಲಿ ಶಿಕ್ಷಕರು ಉತ್ತಮ ಮಾರ್ಗದರ್ಶನ ನೀಡಿದಲ್ಲಿ ಈ ಬಾರಿಯ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಹಕಾರಿಯಾಗಲಿದೆ ಎಂದರು.

ಓಬಳಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿದ ಬಿಇಒ ಮಕ್ಕಳ ಶೈಕ್ಷಣಿಕ ಮಟ್ಟವನ್ನು ಪರೀಕ್ಷಿಸಿದರು. ಹಲವಾರು ಗ್ರಾಮೀಣ ಮಕ್ಕಳು ಕ್ಷೇತ್ರ ಶಿಕ್ಷಣಾ ಧಿಕಾರಿ ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಮಕ್ಕಳ ಶೈಕ್ಷಣಿಕ ಬೆಳವಣಿಗೆಯನ್ನು ಕಂಡ ಕ್ಷೇತ್ರ ಶಿಕ್ಷಣಾಧಿಕಾರಿ ಗಡಿಭಾಗದ ಶಾಲೆಗಳಿಗೆ ಮತ್ತಷ್ಟು ಸೌಲಭ್ಯಗಳನ್ನು ನೀಡಿದಲ್ಲಿ ಉತ್ತಮ ಫಲಿತಾಂಶ ತಂದುಕೊಡುವಷ್ಟು ಜಾಣ ಮಕ್ಕಳಿದ್ದಾರೆ ಎಂದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next