Advertisement

ಉತ್ತಮ ಸಂದೇಶ ನೀಡಿದ ವಚನಕಾರರು

07:16 AM Mar 08, 2019 | |

ಕೋಲಾರ: ಸಮಾಜದಲ್ಲಿ ಸಮ ಸಮಾಜ ನಿರ್ಮಾಣ ಮಾಡಲು ಅನೇಕ ವಚನಕಾರರು ತಮ್ಮನ್ನು ತೊಡಗಿಸಿಕೊಂಡಿದ್ದರು. ಅದರಂತೆ 12 ನೇ ಶತಮಾನದಲ್ಲಿ ದಲಿತ ವಚನಕಾರರು ಪ್ರಮುಖ ಪಾತ್ರ ವಹಿಸಿದರು ಎಂದು ಜಿಲ್ಲಾ ಧಿಕಾರಿ ಜೆ.ಮಂಜುನಾಥ್‌ ಹೇಳಿದರು.

Advertisement

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ದಲಿತ ವಚನಾಕಾರರ ಜಯಂತಿ ಉದ್ಘಾಟಿಸಿ ಮಾತನಾಡಿದರು. 

12ನೇ ಶತಮಾನದಲ್ಲಿ ಮಾದಾರ ಚನ್ನಯ್ಯ, ಸಮಗಾರ ಹರಳಯ್ಯ, ಉರಿಲಿಂಗಪೆದ್ದಿ, ಮಹದಾರ ಧೂಳಯ್ಯ, ದೋಹಾರ ಕಕ್ಕಯ್ಯ ಮುಂತಾದ ದಲಿತ ವಚನಕಾರರು ತಮ್ಮದೇ ಆದ ವಚನಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ರಾಜ್ಯದಲ್ಲಿ ಪ್ರಥಮಬಾರಿಗೆ ದಲಿತ ಸಾಲಿತ್ಯ ಸಮ್ಮೇಳನವನ್ನು ಕೋಲಾರದಲ್ಲಿ ಹಮ್ಮಿಕೊಳ್ಳುವ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್‌ ತಿಳಿಸಿದ್ದು ಶೀಘ್ರ  ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. 

ತಾಪಂ ಅಧ್ಯಕ್ಷ ಸೂಲೂರು ಎಂ.ಆಂಜಿನಪ್ಪ, ಪ್ರತಿ 6 ಶತಮಾನಗಳಿಗೊಮ್ಮೆ ಯುಗ ಪುರುಷರು ಜನಿಸಿ ಬದಲಾವಣೆ ಕ್ರಾಂತಿ ತಂದಿದ್ದಾರೆ. 6ನೇ ಶತಮಾನದಲ್ಲಿ ಬುದ್ಧ, 12ನೇ ಶತಮಾನದಲ್ಲಿ ಬಸವಣ್ಣ ಹಾಗೂ 18ನೇ ಶತಮಾನದಲ್ಲಿ ಅಂಬೇಡ್ಕರ್‌ ಬದಲಾವಣೆ ತಂದಿದ್ದಾರೆ. 12 ನೇ ಶತಮಾನದಲ್ಲಿ ಬಸವಣ್ಣ ಅವರು ದಲಿತ ವಚನಕಾರರಿಗೆ ಪ್ರೋತ್ಸಾಹ ನೀಡಿದರು ಎಂದು ತಿಳಿಸಿದರು. 

Advertisement

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ನಾಗಾನಂದ ಕೆಂಪರಾಜ್‌, ಜನರಲ್‌ ಕಾರ್ಯಪ್ಪ ಶಾಲೆ ಅಧ್ಯಕ್ಷ ಡಾ.ಎಂ.ಚಂದ್ರಶೇಖರ್‌, ಮುಖಂಡರಾದ ಬೆಳಮಾರನಹಳ್ಳಿ ಆನಂದ್‌, ಖಾದ್ರಿಪುರ ಮುನಿಯಪ್ಪ, ಚೇತನ್‌ ಬಾಬು, ನಾರಾಯಣಸ್ವಾಮಿ, ಪಿಚ್ಚಳ್ಳಿ ಶ್ರೀನಿವಾಸ್‌, ಖಾದ್ರಿಪುರ ಬಾಬು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಸಿಂಧು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಿ.ಎಂ. ರವಿಕುಮಾರ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next