Advertisement

ಅಡುಗೆ ಎಣ್ಣೆ ಸುಂಕ ಇಳಿಕೆ:4ರೂಪಾಯಿ ಇಳಿಸಿದ್ದೇ ಕೇಂದ್ರದ ಮಹಾನ್ ಸಾಧನೆ: ಗುಂಡೂರಾವ್ ವ್ಯಂಗ್ಯ

11:34 AM Sep 12, 2021 | Team Udayavani |

ಬೆಂಗಳೂರು : ಹಬ್ಬಗಳ ಋತುವಿನಲ್ಲಿ ಅಡುಗೆ ಎಣ್ಣೆಗಳ ಬೆಲೆಯನ್ನು ನಿಯಂತ್ರಣದಲ್ಲಿ ಇರಿಸುವುದಕ್ಕಾಗಿ ಕೇಂದ್ರ ಸರಕಾರವು ತಾಳೆ, ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆಗಳ ಆಮದು ಸುಂಕವನ್ನು ಶೇ. 2.11ರಷ್ಟು ಕಡಿಮೆ ಮಾಡಿದ ಬೆನ್ನಿಗೆ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್, ಮೋದಿ ಸರ್ಕಾರ ಹಬ್ಬಕ್ಕೆ ಜನಸಾಮಾನ್ಯರಿಗೆ ಕೊಟ್ಟ ಬಹುದೊಡ್ಡ ಕೊಡುಗೆಯಿದು ಎಂದು ಹೇಳಿದ್ದಾರೆ.

Advertisement

ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಕೇಂದ್ರ ಸರ್ಕಾರವನ್ನು ವ್ಯಂಗ್ಯ ಧ್ವನಿಯಲ್ಲಿ ಟೀಕೆ ಮಾಡಿದ ಗುಂಡೂರಾವ್, ಕೇಂದ್ರ ಸರ್ಕಾರ ಅಡುಗೆ ಎಣ್ಣೆಗಳ ಆಮದು ಸುಂಕವನ್ನು ಶೇಕಡಾ 2.11 ರಷ್ಟು ಇಳಿಸಿ, ಲೀಟರ್ ಎಣ್ಣೆಗೆ 4 ರೂಪಾಯಿ ಕಡಿಮೆ ಮಾಡಿದೆ. ಜನಸಾಮಾನ್ಯರಿಗೆ ಮೋದಿ ಸರ್ಕಾರ ಹಬ್ಬಕ್ಕೆ ಕೊಟ್ಟ ಬಹುದೊಡ್ಡ ಕೊಡುಗೆಯಿದು. 80 ರೂಪಾಯಿ ಇದ್ದ ಅಡುಗೆ ಎಣ್ಣೆ ದರವನ್ನು 160 ರೂಪಾಯಿಗೆ ಏರಿಸಿದ್ದು ಇದೇ ಕೇಂದ್ರ ಸರ್ಕಾರ. ಈಗ 4 ರೂಪಾಯಿ ಇಳಿಸಿದ್ದೇ ಕೇಂದ್ರದ ಮಹಾನ್ ಸಾಧನೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ : ಭಾರೀ ಇಳಿಕೆ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 28,591 ಕೋವಿಡ್ ಪ್ರಕರಣ ಪತ್ತೆ

ಇನ್ನು, ಕೇಂದ್ರ ಸರ್ಕಾರದ ಸುಂಕ ಇಳಿಕೆಯಿಂದಾಗಿ ಪ್ರತೀ ಲೀಟರ್‌ ಅಡುಗೆ ಎಣ್ಣೆಯ ಬೆಲೆ 4 ರೂ.ಗಳಿಂದ 5 ರೂ.ಗಳ ವರೆಗೆ ಕಡಿಮೆಯಾಗಲಿದೆ.

ಇದರಿಂದ ಕೇಂದ್ರಕ್ಕೆ 1,100 ಕೋಟಿ ರೂ. ಆದಾಯ ನಷ್ಟವಾಗಲಿದೆ ಎಂದು ಕೇಂದ್ರ ಆಹಾರ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

Advertisement

ವಿತ್ತ ಸಚಿವಾಲಯದ ಪ್ರಕಟನೆಯ ಪ್ರಕಾರ ಕಚ್ಚಾ ತಾಳೆ ಎಣ್ಣೆಯ ಆಮದು ಸುಂಕವನ್ನು ಶೇ. 10 ರಿಂದ ಶೇ. 2.5ಕ್ಕೆ, ಕಚ್ಚಾ ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆಗಳ ಆಮದು ಸುಂಕವನ್ನು ಶೇ. 7.5 ರಿಂದ ಶೇ. 2.5ಕ್ಕೆ ಇಳಿಕೆ ಮಾಡಲಾಗಿದೆ.

ಇದನ್ನೂ ಓದಿ : ಸಚಿವರಾದ ಪ್ರಹ್ಲಾದ್ ಜೋಶಿ, ತೋಮರ್ ಗೆ ಗುಜರಾತ್ ನೂತನ ಮುಖ್ಯಮಂತ್ರಿ ಆಯ್ಕೆ ಹೊಣೆ?

Advertisement

Udayavani is now on Telegram. Click here to join our channel and stay updated with the latest news.

Next