ಸಕಲೇಶಪುರ: ಕಂದಾಯ ಭೂಮಿಯಲ್ಲಿ ಅಕ್ರಮ ಮನೆ ನಿರ್ಮಾಣವಾಗುತ್ತಿದ್ದರೂ ಅಧಿಕಾರಿಗಳು ಜಾಣ ಕುರುಡು ತೋರುತ್ತಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನ ಮೂಡಿದೆ.
ಆದರೆ ಈ ಸಂದರ್ಭದಲ್ಲಿ ದೊಡ್ಡಕೆರೆಯ ಬದಿಗಳಲ್ಲಿ ಕೆಲ ವ್ಯಕ್ತಿಗಳು ಅಕ್ರಮವಾಗಿ ಮನೆಗಳನ್ನು ನಿರ್ಮಿಸಿ ಕಾಮಗಾರಿಗೆ ಅಡ್ಡಿಯುಂಟು ಮಾಡಿದರು. ಕಂದಾಯ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳನ್ನು ತೆರವುಗೊಳಿಸುವಂತೆ ತಾಲೂಕು ಆಡಳಿತ ಮನವಿ ಮಾಡಿದರೂ ಒತ್ತುವರಿದಾರರು ಕೋರ್ಟ್ ಮೆಟ್ಟಲೇ ರಿದ್ದರು ಆದರೆ ಅಂದಿನ ಉಪವಿಭಾಗಾಧಿಕಾರಿ ಡಾ.ಮಧುಕೇಶ್ವರ್ ಒತ್ತುವರಿ ತೆರವು ಗೊಳಿಸಿದ್ದರು. ಈ ಸಂದರ್ಭದಲ್ಲಿ ಅಕ್ರಮ ಮನೆಗಳನ್ನು ನಿರ್ಮಿಸಿದ ವ್ಯಕ್ತಿಯ ಪರ ನಿಂತ ಕೆಲವರು ಅಯ್ಯಪ್ಪ ಸ್ವಾಮಿ ದೇಗುಲದ ಆವರಣದಲ್ಲಿ ಅಕ್ರಮವಾಗಿ ಆರ್‌ಸಿಸಿ ಕಟ್ಟಡವನ್ನು ತೆರವು ಗೊಳಿಸಿದರೆ ಮಾತ್ರ ತನ್ನ ಗುಡಿಸಲುಗಳು ತೆರವುಗೊಳಿಸುವುದು ಎಂದು ಹಠ ಹಿಡಿದ ಕಾರಣ ಕಟ್ಟಡ ತೆರವುಗೊಳಿಸಲಾಗಿತ್ತು.
ಈ ಹಿಂದೆ ಒತ್ತುವರಿ ಮಾಡಿ ಮನೆ ನಿರ್ಮಿಸಿದ ವ್ಯಕ್ತಿಗಳು ಮತ್ತೆ ಅದೇ ಜಾಗದಲ್ಲಿ ಮನೆ ನಿರ್ಮಿಸಿದ್ದಾರೆ. ಕೂಡಲೇ ತಾಲೂಕು ಆಡಳಿತ ಅಕ್ರಮ ಗುಡಿಸಲು ತೆರವು ಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
Advertisement
ದೆಹಲಿಯಲ್ಲಿ ಕರ್ನಾಟಕದ ಪ್ರತಿನಿಧಿ ಯಾಗಿ ಕೆಲಸ ನಿರ್ವಹಿಸುತ್ತಿರುವ ಹಿರಿಯ ಅಧಿಕಾರಿ ಬೈಕೆರೆ ನಾಗೇಶ್ ಅವರು ಆಸಕ್ತಿ ವಹಿಸಿ ಅಂದಾಜು 98 ಲಕ್ಷ ರೂ. ವೆಚ್ಚದಲ್ಲಿ ದೊಡ್ಡ ಕೆರೆಗೆ ಕಾಯಕಲ್ಪ ನೀಡುವ ಕಾಮಗಾರಿಗೆ ಬೇಕಾದ ಅನುದಾನವನ್ನು ಬಿಡುಗಡೆ ಮಾಡಿಸಿದ್ದರು.