Advertisement
ಯೋಗದ ಮಹತ್ವ, ಜೀವನದಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ಸಾರ್ವಜನಿಕರು, ಯುವ, ವಿದ್ಯಾರ್ಥಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಜೊತೆಗೆ ವಿಶ್ವ ಯೋಗ ದಿನವನ್ನು ವಿನೂತನವಾಗಿ ಆಚರಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಜಿಲ್ಲಾ ಯೋಗ ಒಕ್ಕೂಟ, ತಪೋವನ ಹಾಗೂ ಅಶ್ವಿನಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು, ಪತಂಜಲಿ ಯೋಗ ಸಂಸ್ಥೆ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ, ರಾಷ್ಟ್ರೀಯ ಸೇವಾದಳ, ಎಎಫ್‌ಐ, ಎನ್‌ಐಎಂಎ,ಎನ್‌ಸಿಸಿ, ಎನ್‌ಎಸ್‌ಎಸ್, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಮತ್ತು ಇಲಾಖೆಗಳು ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮದ ಭಾಗವಾಗಿ ಹಮ್ಮಿಕೊಂಡಿದ್ದ ಯೋಗ ಜಾಥಾ ಸಾರ್ವಜನಿಕರ ಗಮನ ಸೆಳೆಯಿತು.
ಬೃಹತ್ ಯೋಗ ಜಾಥಾ, ವಿದ್ಯಾರ್ಥಿ ಭವನ ವೃತ್ತ, ಕೆಇಬಿ ವೃತ್ತ, ಜಯದೇವ ವೃತ್ತ, ಮಹಾನಗರಪಾಲಿಕೆ, ಮಹಾತ್ಮಗಾಂಧಿ ವೃತ್ತ, ಪಿಜೆ ಹೋಟೆಲ್, ಎವಿಕೆ ಕಾಲೇಜು ರಸ್ತೆ, ರಾಂ ಅಂಡ್ ಕೋ ವೃತ್ತ, ಚರ್ಚ್ ರಸ್ತೆ ಮೂಲಕ ಮೋತಿ ವೀರಪ್ಪ ಕಾಲೇಜು ಆವರಣದಲ್ಲಿ ಮುಕ್ತಾಯಗೊಂಡಿತು. ವಿಶ್ವ ಯೋಗ ದಿನಾಚರಣೆ, ಮಹತ್ವ, ಜೀವನದಲ್ಲಿ ಯೋಗ ಅಳವಡಿಕೆ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಮ್ಮ ನಡಿಗೆ ಆರೋಗ್ಯದೆಡೆಗೆ… ಎಂಬ ಘೋಷವಾಕ್ಯ, ಯೋಗದ ಮಹತ್ವ ಸಾರುವ ಘೋಷಣೆ ಮೊಳಗಿದವು. ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಯೋಗ ಜಾಗೃತಿ ರಥ ಅತ್ಯಾಕರ್ಷಕವಾಗಿತ್ತು.
Related Articles
ಜಯಣ್ಣ ಬಾದಾಮಿ, ಅನಿಲ್ ರಾಯ್ಕರ್, ರಾಜು ಎಲ್. ಬದ್ಧಿ ಒಳಗೊಂಡಂತೆ ವಿವಿಧ ಯೋಗ ಸಂಸ್ಥೆ ಪದಾಧಿಕಾರಿಗಳು, ಯೋಗಾಸಕ್ತರು ಪಾಲ್ಗೊಂಡಿದ್ದರು.
Advertisement
ಯೋಗ ದಿನಾಚರಣೆಯ ಅಂಗವಾಗಿ ಇಂದು ಸೋಮವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 123 ರವರೆಗೆ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯೋಗ ಮತ್ತು ಆರೋಗ್ಯ… ವಿಷಯದ ಕುರಿತು ಚಿತ್ರಕಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ಮೊ: 94496-29061, 98440-40813 ಗೆ ಸಂಪರ್ಕಿಸುವಂತೆ ಕೋರಲಾಗಿದೆ.