Advertisement
ಪಟ್ಟಣದಲ್ಲಿರುವ ಮಾಜಿ ಸಚಿವ ದಿ.ಎಸ್.ನಂಜಪ್ಪ ಅವರ ನಿವಾಸಕ್ಕೆ ಭಾನುವಾರ ಭೇಟಿ ನೀಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಟ್ಟು ಕೆಜೆಪಿ ಅಭ್ಯರ್ಥಿಯಾಗಿ ನಂತರದ ದಿನಗಳಲ್ಲಿ ಯಾವುದೇ ಪಕ್ಷದಲ್ಲಿ ಗುರುತಿಸಿಕೊಳ್ಳದೆ ತಟಸ್ಥರಾಗಿದ್ದ ನಂಜಪ್ಪ ಅವರ ಪುತ್ರ ಹಾಗೂ ನವನಗರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತುಕತೆ ನಡೆಸಿದರು.
Related Articles
Advertisement
ಲೂಟಿ ಹಣದಲ್ಲೇ ಕೈ ಚುನಾವಣೆ: 2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದು ಜನತೆಯ ಭಾವನೆಯಾಗಿದೆ. ಕಾಂಗ್ರೆಸ್ ಪಕ್ಷದ ಜವಾಬ್ದಾರಿಯುತ ಸ್ಥಾನದಲ್ಲಿರುವ ಆರೋಗ್ಯ ಸಚಿವ ರಮೇಶ್‌ಕುಮಾರ್ ಅವರೇ ಹೇಳಿರುವಂತೆ ಭ್ರಷ್ಟಾಚಾರ ಮಾಡುವುದು ತಪ್ಪಲ್ಲ.
ಆದರೆ, ಭ್ರಷ್ಟಾಚಾರ ಮಾಡುವಾಗ ಸಿಕ್ಕಿಹಾಕಿಕೊಳ್ಳಬಾರದು ಎಂದಿದ್ದಾರೆ. ಹಾಗೂ ಕಳೆದ ಐದು ವರ್ಷಗಳಲ್ಲಿ ಭ್ರಷ್ಟಾಚಾರವೆಸಗಿ ಲೂಟಿ ಮಾಡಿರುವ ಸಾವಿರಾರು ಕೋಟಿ ರೂ.ಹಣದಲ್ಲಿಯೇ ಮುಂಬರುವ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಎದುರಿಸಲಿದೆ ಎಂದು ಕಿಡಿಕಾರಿದರು.
ಅಧಿಕಾರದ ವಿಶ್ವಾಸ: ಈಗಾಗಲೇ ಬಿಡುಗಡೆ ಗೊಳಿಸಿರುವ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಎಲ್ಲಾ ರೀತಿಯಲ್ಲಿ ಪರಿಶೀಲಿಸಿ, ಸಮಾಲೋಚಿಸಿಯೇ ಪಕ್ಷದ ಅಭ್ಯರ್ಥಿಗಳ ಆಯ್ಕೆ ಮಾಡಲಾಗಿದೆ. ರಾಜ್ಯಾದ್ಯಂತ ಪಕ್ಷದ ಸಂಘಟನೆಗಾಗಿ ಸಮಾವೇಶಗಳು ಮತ್ತು ಸಂವಾದಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಬಾರಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಖಂಡಿತ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಇದಕ್ಕೂ ಮುನ್ನ ಪಟ್ಟಣದ ಕೃಷ್ಣರಾಜೇಂದ್ರ ಕ್ರೀಡಾಂಗಣಕ್ಕೆ ಬೆಳಗ್ಗೆ 10.30ರ ಸಮಯದಲ್ಲಿ ಹೆಲಿಕಾಪ್ಟರ್ ಮೂಲಕ ಬಂದಿಳಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಶಾಸಕ ಸಾ.ರಾ.ಮಹೇಶ್ ಅವರನ್ನು ತಾಲೂಕು ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್, ನಗರಾಧ್ಯಕ್ಷ ಡಿ.ಸಿ.ಮಂಜುನಾಥ್, ಪುರಸಭಾಧ್ಯಕ್ಷೆ ಕವಿತಾ ವಿಜಯ್‌ಕುಮಾರ್ ಮತ್ತು ಮುಖಂಡರು ಹೂಮಾಲೆ ಹಾಕಿ ಗೌರವಿಸುವ ಮೂಲಕ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಲಲಿತಮ್ಮ ನಂಜಪ್ಪ, ದಿನೇಶ್‌ನಂಜಪ್ಪ, ಜಿಪಂ ಸದಸ್ಯ ಅಮಿತ್ ವಿ.ದೇವರಹಟ್ಟಿ, ಮಾಜಿ ಉಪಾಧ್ಯಕ್ಷ ಎ.ಎಸ್.ಚನ್ನಬಸಪ್ಪ, ಮೂಳೆ ತಜ್ಞ ಡಾ.ಮೆಹಬೂಬ್ ಖಾನ್, ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್, ಪಿಎಲ್.ಡಿ. ಬ್ಯಾಂಕ್ ಮಾಜಿ ಅಧ್ಯಕ್ಷ ಹರಿಚಿದಂಬರ, ಪುರಸಭೆ ಸದಸ್ಯರಾದ ಕೆ.ಎಲ್.ಜಗದೀಶ್, ಸುಬ್ರಮಣ್ಯ, ನಂಜುಂಡ, ಶಿವಕುಮಾರ್, ಗೀತಾಮಹೇಶ್, ಸರೋಜಮ್ಮಮಾದಯ್ಯ, ಉಮೇಶ್, ಕೆ.ಎಲ್.ಕುಮಾರ್, ಮಾಜಿ ಸದಸ್ಯರಾದ ಕೆ.ಆರ್.ಗಿರೀಶ್, ವಿಜಯ್ ಕುಮಾರ್, ರಾಜಾ ಶ್ರೀಕಾಂತ್, ತಾ.ಪಂ.ಸದಸ್ಯ ಶ್ರೀನಿವಾಸ್ ಪ್ರಸಾದ್, ಶೋಭಾ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಅಣ್ಣೇಗೌಡ, ಇನ್ನಿತರರು ಇದ್ದರು.
ಜೆಡಿಎಸ್ ಪಕ್ಷದ ಸಂಸ್ಥಾಪಕರಲ್ಲಿ ನಮ್ಮ ತಂದೆಯವರು ಒಬ್ಬರಾಗಿದ್ದರು, ಜೆಡಿಎಸ್ ನಮ್ಮ ಸಿದ್ಧಾಂತವನ್ನು ಒಪ್ಪುವ ಪಕ್ಷ, ಸ್ಥಳೀಯ ಭಿನ್ನಾಭಿಪ್ರಾಯಗಳಿಂದ ಬೇರೆ ಪಕ್ಷಕ್ಕೆ ಹೋಗಿದ್ದರು ರಾಜ್ಯ ಮಟ್ಟದಲ್ಲಿ ದೇವೇಗೌಡರ ಸಂಪರ್ಕ ಮತ್ತು ಬಾಂದವ್ಯ ಬಿಟ್ಟಿರಲಿಲ್ಲ. ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತೂಮ್ಮೆ ಮುಖ್ಯಮಂತ್ರಿಯಾಗಿ ಕಾಣಬೇಕೆಂಬ ಆಶಯದಂತೆ ಈಗ ಜೆಡಿಎಸ್ ಪಕ್ಷವನ್ನು ಸೇರಿದ್ದೇನೆ.-ಕೆ.ಎನ್.ಬಸಂತ್, ನವನಗರ ಅರ್ಬನ್ ಬ್ಯಾಂಕ್ ಅಧ್ಯಕ್ಷ.