ದಾವಣಗೆರೆ: ಯತ್ನಾಳ್ ಗೆ ಸಂಬಂಧಿಸಿದಂತೆ ಏನೆಲ್ಲಾ ಬೆಳವಣಿಗೆಯಾಗಿದೆ ಎಂಬುದನ್ನು ರಾಷ್ಟ್ರೀಯ ಶಿಸ್ತು ಸಮಿತಿಗೆ ಮಾಹಿತಿ ನೀಡಿದ್ದೇವೆ. ಅವರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದು ದಾವಣಗೆರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಸಚಿವರು ಶಾಸಕರಿಗೆ ಸಹಕಾರ ನೀಡುತ್ತಿಲ್ಲ ಎಂಬುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಯಡಿಯೂರಪ್ಪ ಶಾಸಕರ ಜೊತೆ ಸಭೆ ನಡೆಸಿದ್ದಾರೆ. ಯಾರಿಗೂ ಕೂಡ ಪಕ್ಷದ ಹಾಗೂ ಸಿಎಂ ವಿರುದ್ಧ ಅಸಮಾಧಾನವಿಲ್ಲ. ಕೆಲ ಶಾಸಕರು ಅನುದಾನವನ್ನು ಕೇಳಿದ್ದಾರೆ. ಅವರಿಗೆ ಸಿಎಂ ಯಡಿಯೂರಪ್ಪನವರು ಕೋವಿಡ್ ಸಂದರ್ಭದ ಬಗ್ಗೆ ವಿವರಿಸಿದ್ದಾರೆ ಏನೇ ಇದ್ದರೂ ಸಿಎಂ ಬಳಿ ಚರ್ಚೆ ಮಾಡಬೇಕು, ಇಲ್ಲ ನನ್ನ ಬಳಿ ಚರ್ಚೆ ಮಾಡಬೇಕು. ಏನಾದರೂ ನಮ್ಮನ್ನು ಬಿಟ್ಟು ಹೊರಗಡೆ ಮಾತನಾಡಿದರೆ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದರು.
ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷದ ಕೈ ಕಾಲು ಹಿಡಿಯುತ್ತಿವೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ 45 ಸಾವಿರ ಬಿಜೆಪಿ ಬೆಂಬಲಿತ ಕಾರ್ಯಕರ್ತರು ಗೆದ್ದಿದ್ದಾರೆ. ಒಟ್ಟು 3500 ಮಂದಿಗೆ ಗ್ರಾ. ಪಂ ಅಧ್ಯಕ್ಷರಾಗುವ ಅವಕಾಶವಿದೆ. ಎಲ್ಲೂ ಯಾವ ಪಕ್ಷದ ಜೊತೆ ಹೊಂದಾಣಿಕೆ ಒಪ್ಪಂದದ ಪ್ರಶ್ನೆಯೇ ಇಲ್ಲ.
ಇದನ್ನೂ ಓದಿ: ಅನೈತಿಕ ಸಂಬಂಧ ; ಕೊಡಲಿಯಿಂದ ಕೊಚ್ಚಿ ಪತ್ನಿ ಮತ್ತು ಆಕೆಯ ಪ್ರಿಯಕರನ ಕೊಲೆಗೈದ ಪತಿ
ಯಾವ ಪಕ್ಷದ ಕಾಲು ಹಿಡಿಯುವ ಅವಶ್ಯಕತೆ ಬಿಜೆಪಿಗಿಲ್ಲ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಸಾಮಾರ್ಥ್ಯ ಬಿಜೆಪಿಗೆ ಇದೆ. ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಗಳಿಗೆ ಪರಮಾಧಿಕಾರ ಇದೆ. ಯಾರಿಗೂ ಸಚಿವರಾಗಬೇಕೆಂಬ ಅವಸರ ಇಲ್ಲ. ಮುಖ್ಯಮಂತ್ರಿ ಗಳ ಬಳಿ 7 ಖಾತೆಗಳಿದ್ದು, ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ
ಎಲ್ಲಾ ಸಚಿವರು ಅವರವರ ಜವಬ್ಧಾರಿ ಚೆನ್ನಾಗಿ ಮಾಡುತ್ತಿದ್ದಾರೆ. ಈ ಹಿಂದಿನ ಮುಖ್ಯಮಂತ್ರಿ ಬಳಿ 13 ಖಾತೆಗಳಿದ್ದವು. ಯಾರಿಗೂ ಅವಸರ ಇಲ್ಲ ಜನಗಳಿಗೆ ಉತ್ತಮ ಆಡಳಿತವನ್ನು ಬಿಜೆಪಿ ನೀಡುತ್ತಿದೆ ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದರು.
ಇದನ್ನೂ ಓದಿ: ಲವ್ ಜಿಹಾದ್ ಅಂತಾರಲ್ಲ… ಯೋಗಿ ಆದಿತ್ಯನಾಥ್ ಮದುವೆ ಆಗಿದ್ದಾನಾ ?: ಸಿ.ಎಂ ಇಬ್ರಾಹಿಂ