Advertisement

ಯಾವ ಪುರುಷಾರ್ಥಕ್ಕೆ ಬಿಜೆಪಿ ರೈತ ಸಮಾವೇಶ 

12:01 PM Oct 27, 2017 | Team Udayavani |

ಮೈಸೂರು: ಕೇಂದ್ರ ಸರ್ಕಾರದಿಂದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡಿಸಲಾಗದ ಬಿ.ಎಸ್‌.ಯಡಿಯೂರಪ್ಪ ರೈತರ ಸಮಾವೇಶವನ್ನು ಯಾವ ಪುರಷಾರ್ಥಕ್ಕೆ ಮಾಡುತ್ತಿದ್ದಾರೆ ಎಂದು ಸಂಸದ ಆರ್‌.ಧ್ರುವನಾರಾಯಣ್‌ ವ್ಯಂಗ್ಯವಾಡಿದರು.

Advertisement

ವರುಣಾ ಕ್ಷೇತ್ರದ ಭುಗತಗಳ್ಳಿ, ವಾಜಮಂಗಲ, ಹಳ್ಳಿಕೆರೆ ಹುಂಡಿ, ಹಾರೋಹಳ್ಳಿ, ಪಿಲ್ಲಹಳ್ಳಿ, ದಂಡಿಕೆರೆ, ಚಿಕ್ಕಹಳ್ಳಿ ಚೋರನಹಳ್ಳಿ ಗ್ರಾಮಗಳಲ್ಲಿ ಸುಮಾರು 11 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ, ಶುದ್ಧಕುಡಿಯುವ ನೀರಿನ ಘಟಕಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ದೇಶದಲ್ಲಿ ಕರ್ನಾಟಕ ರಾಜ್ಯ ಅಭಿವೃದ್ಧಿಯಲ್ಲಿ ಮೊದಲನೆ ಸ್ಥಾನಲ್ಲಿದೆ. ಕೊಟ್ಟ ಎಲ್ಲಾ ಭರವಸೆಗಳನ್ನು ಈಡೇರಿಸಿದೆ. ಎಲ್ಲಾ ವರ್ಗದ ಜನರಿಗೆ ಎಲ್ಲಾ ಭಾಗ್ಯಗಳನ್ನು ನೀಡಿದೆ. ರಾಜ್ಯದಲ್ಲಿ ರೈತರ ಮೇಲಿನ ಸಾಲ 8730 ಕೋಟಿ ರೂ. ಮನ್ನಾ ಮಾಡಿದ್ದರಿಂದ ಜಿಲ್ಲೆಯ 68 ಸಾವಿರ ಮಂದಿಗೆ 275 ಕೋಟಿ ಸಾಲ ಮನ್ನಾ ಆಗಿದೆ ಎಂದರು.

ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಪ್ರತಿವರ್ಷ 27530 ಕೋಟಿ ಖರ್ಚುಮಾಡಲಾಗಿದೆ. ವರುಣಾ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರ ಮಾಡಿರುವ ಸಿದ್ದರಾಮಯ್ಯನವರು ಈ ರಾಜ್ಯದಲ್ಲಿ ಸಮರ್ಥ ಆಳ್ವಿಕೆ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ರೀತಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರೂ ಕಳೆದ ಒಂದು ವರ್ಷದಿಂದ ಕ್ಷೇತ್ರದಲ್ಲಿ ಜನರ ಸೇವೆ ಮಾಡುತ್ತಿದ್ದಾರೆ. ನಿಮ್ಮ ಆಶೀರ್ವಾದ ಅವರ ಮೇಲಿರಲಿ ಎಂದರು.

ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ, ಬಿಜೆಪಿ ಪಕ್ಷ ರೈತರಿಗೆ ಕೊಟ್ಟಿರುವ ಕೊಡುಗೆ ಏನು ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರೈತರಿಗೋಸ್ಕರ ಸಾಲಮನ್ನಾಮಾಡಿದೆ. ನಾಲೆಗಳ ಆಧುನೀಕರಣ ಮಾಡಿದೆ. ಕೆರೆಗಳಿಗೆ ನೀರನ್ನು ತುಂಬಿಸಿದೆ. ಕೃಷಿಭಾಗ್ಯ, ಕ್ಷೀರಭಾಗ್ಯ, ಬಡ್ಡಿರಹಿತ ಸಾಲ ನೀಡುತ್ತಿದ್ದು ರೈತರು ಕಾಂಗ್ರೆಸ್‌  ಬೆಂಬಲಿಸಬೇಕು ಎಂದರು.

Advertisement

ವರುಣಾ ಕ್ಷೇತ್ರದ ಅಭಿವೃದ್ಧಿಗೆ ಇದುವರೆಗೆ 1572 ಕೋಟಿ ರೂ.ಗಳನ್ನು ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದಾರೆ. ಮುಂದೆ ಸಾಮಾನ್ಯವರ್ಗದ ಜನರ ಕಾಲೋನಿಗಳ ರಸ್ತೆಗಳನ್ನು ಅಭಿವೃದ್ಧಿಪಡಿಸುತ್ತೇವೆ. ನಿಮ್ಮೆಲ್ಲರ ಆಶೀರ್ವಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್‌ ಮೇಲಿರಲಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ, ಜಿಪಂ ಸದಸ್ಯೆ ಪ್ರೇಮಾ, ಗ್ರಾಪಂ ಅಧ್ಯಕ್ಷೆ ಸವಿತಾ, ತಾಪಂ ಸದಸ್ಯ ಮುದ್ದುರಾಮೇಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುದ್ದೇಗೌಡ ಮತ್ತಿತರರಿದ್ದರು.

ನಾಟಕಕ್ಕೋಸ್ಕರ ರೈತರ ಸಮಾವೇಶ
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ರೈತರ ಮೇಲೆ ಗೋಲಿಬಾರ್‌ ಮಾಡಿ, ರೈತರ ಸಾಲಮನ್ನಾ ಮಾಡಲು ನೋಟ್‌ಪ್ರಿಂಟ್‌ ಮಾಡುವ ಮಿಷನ್‌ ಇಲ್ಲ ಎಂದಿದ್ದವರು. ಅಲ್ಲದೆ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಾಲವನ್ನು ಕೇಂದ್ರ ಸರ್ಕಾರದಿಂದ ಮನ್ನಾ ಮಾಡಿಸಲಾಗದವರು, ಕೇವಲ ನಾಟಕಕೋಸ್ಕರ ರೈತರ ಸಮಾವೇಶ ಮಾಡುತ್ತಿದ್ದಾರೆ ಎಂದು ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಲೇವಡಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next