Advertisement

ದಕ್ಷಿಣ ಭಾರತದಲ್ಲಿ ಪ್ರಾಂತೀಯ ಪಕ್ಷಗಳ ಜತೆಗಿನ ಮೈತ್ರಿಗೆ ಬಿಜೆಪಿ ಒಲವು

06:00 AM Sep 04, 2018 | Team Udayavani |

ಹೊಸದಿಲ್ಲಿ: 2019ರ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೇರಲು ಅಗತ್ಯವಾದರೆ ದಕ್ಷಿಣ ಭಾರತದ ಪಕ್ಷಗಳ ಬೆಂಬಲ ಪಡೆಯುವ ಅವಕಾಶಗಳಿಗೆ ಬಿಜೆಪಿ ಎದುರು ನೋಡುತ್ತಿದೆ. ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಪ್ರಾದೇಶಿಕ ಪಕ್ಷಗಳ ಬೆಂಬಲ ಪಡೆಯಬಹುದಾಗಿದೆ. ಹೀಗಾಗಿ ಕರ್ನಾಟಕ ಹೊರತುಪಡಿಸಿ ದಕ್ಷಿಣದ ಉಳಿದ ರಾಜ್ಯಗಳಲ್ಲಿ ಇತರ ಪಕ್ಷಗಳ ಜೊತೆಗೆ ಸಮಾನ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದಂತಿದೆ. ತಮಿಳುನಾಡಿನಲ್ಲಿ ಡಿಎಂಕೆ ವಿರುದ್ಧ ತೀವ್ರ ವಾಗ್ಧಾಳಿಯನ್ನು ಬಿಜೆಪಿ ನಡೆಸುತ್ತಿಲ್ಲ. ಅಷ್ಟೇ ಅಲ್ಲ, ಎಐಎಡಿಎಂಕೆ ಜೊತೆಗೆ ಬಿಜೆಪಿ ಉತ್ತಮ ಸಂಬಂಧ ಕಾಯ್ದುಕೊಂಡಿದೆ. ಇನ್ನು ತೆಲಂಗಾಣದಲ್ಲಿ ಎನ್‌ಡಿಎ ಜೊತೆಗೆ ಟಿಆರ್‌ಎಸ್‌ ಕೈಜೋಡಿಸುವ ಸಾಧ್ಯತೆಯಿದೆ. ಆಂಧ್ರಪ್ರದೇಶದಲ್ಲಿ ಒಕ್ಕೂಟದಿಂದ ಟಿಡಿಪಿ ಹೊರನಡೆದರೂ, ವೈಎಸ್‌ಆರ್‌ ಕಾಂಗ್ರೆಸ್‌ ಜೊತೆಗೆ ಸ್ನೇಹಿ ಸಾಧಿಸಲು ಬಿಜೆಪಿಗೆ ಸಾಧ್ಯವಾಗಿದೆ.

Advertisement

ದಕ್ಷಿಣ ಭಾರತದಲ್ಲಿ ಸದ್ಯ ಕರ್ನಾಟಕದಲ್ಲಿ 15, ಆಂಧ್ರದಲ್ಲಿ 2, ತೆಲಂಗಾಣ ಹಾಗೂ ತಮಿಳುನಾಡಿನಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದೆ. ಕೇರಳದಲ್ಲಿ ಒಂದೂ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next