Advertisement

ಶಾಸಕರ ರಾಜೀನಾಮೆಯಿಂದಲೇ ಬಿಜೆಪಿ ಸರಕಾರ ಬಂದದ್ದು; ತಪ್ಪೇನು?

12:03 AM Nov 05, 2019 | Team Udayavani |

ಉಡುಪಿ: ಅನರ್ಹ ಶಾಸಕರು ಅವರವರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದಲೇ ಹಿಂದಿನ ಸರಕಾರ ಪತನವಾದದ್ದು. ಅದೇ ಕಾರಣಕ್ಕಾಗಿ ಯಡಿಯೂರಪ್ಪನವರು ಸರಕಾರ ರಚನೆಗೆ ರಾಜ್ಯಪಾಲರನ್ನು ಕೋರಿದ್ದು. ಇದರಲ್ಲಿ ತಪ್ಪೇನಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.

Advertisement

ಉಡುಪಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶೋಭಾ ಅವರು, ಎಚ್‌.ಡಿ. ಕುಮಾರಸ್ವಾಮಿ ಅವರ ಸರಕಾರವಿರುವಾಗ ಕಾಂಗ್ರೆಸ್‌ ಹೇಗೆ ನಡೆದುಕೊಂಡಿತ್ತು ಎನ್ನುವುದು ಗೊತ್ತಿದೆ. ಸರಕಾರ ಬಿದ್ದು ಹೋಗುವುದಕ್ಕೂ ಸಿದ್ದರಾಮಯ್ಯ ಕಾರಣ ಎಂದು ಜೆಡಿಎಸ್‌ನವರೇ ಹೇಳುತ್ತಿದ್ದಾರೆ ಎಂದರು.

ಸಿದ್ದರಾಮಯ್ಯನವರು ದರ್ಟಿ ಗೇಮ್‌ ಪ್ಲಾನ್‌ ಮನುಷ್ಯ. ಅವರು ಹಿಂದೆ ಜೆಡಿಎಸ್‌ನಲ್ಲಿದ್ದಾಗಲೂ ಬ್ಲ್ಯಾಕ್‌ವೆುàಲ್‌ ಮಾಡುತ್ತಿದ್ದರು. ಕಾಂಗ್ರೆಸ್‌ಗೆ ಬಂದ ಬಳಿಕ ತನಗೆ ಸ್ಥಾನ ಕೊಡಬೇಕೆಂದು ಹೈಕಮಾಂಡನ್ನು ಬ್ಲ್ಯಾಕ್‌ವೆುàಲ್‌ ಮಾಡುತ್ತಿದ್ದಾರೆ. ಈಗ ವಿಪಕ್ಷದ ನಾಯಕ ಸ್ಥಾನ ಪಡೆಯಲೂ ಹೀಗೆ ಮಾಡಿದ್ದಾರೆಂದು ಕಾಂಗ್ರೆಸ್‌ ಮುಖಂಡರೇ ಹೇಳುತ್ತಿದ್ದಾರೆ. ಆದ್ದರಿಂದ ಸಿದ್ದರಾಮಯ್ಯನವರಿಂದ ರಾಜಕೀಯ ಪಾಠ ಕಲಿಯಬೇಕಾಗಿಲ್ಲ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿ, ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಯಾರೂ ಬಾಸ್‌ಗಳು ಇಲ್ಲ. ಅದು ಸಾಂವಿಧಾನಿಕ ಸಂಸ್ಥೆ. ಅವರ ಕಾನೂನು, ನಿಯಮಾವಳಿ ಪ್ರಕಾರ ಕಾರ್ಯಾಚರಿಸುತ್ತಿದ್ದಾರೆ ಎಂದರು. ವಿಜಯಶಂಕರ್‌ ಸಜ್ಜನ ನಾಯಕರು. ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಮತ್ತೆ ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ. ಇದು ಸಿದ್ದರಾಮಯ್ಯನವರ ಜಿಲ್ಲೆಯಲ್ಲೇ ನಡೆಯುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next