Advertisement

2018ರಲ್ಲಿ ಮತ್ತೆ ಬಿಜೆಪಿ ಸರ್ಕಾರ ಸ್ಥಾಪನೆ ಖಚಿತ

12:37 PM Oct 29, 2017 | Team Udayavani |

ಧಾರವಾಡ: ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಪಕ್ಷವು ಮತ್ತೆ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು. 

Advertisement

ಇಲ್ಲಿನ ದೈವಜ್ಞ ಕಲ್ಯಾಣ ಮಂಟಪದಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಮಹಿಳಾ ಮೋರ್ಚಾ ವಿವಿಧ ಘಟಕಗಳ ನೇತೃತ್ವದಲ್ಲಿ ವಿವಿಧ ಮಹಿಳಾ ಮಂಡಳಗಳಿಗೆ ಶನಿವಾರ ಹಮ್ಮಿಕೊಂಡ ಕೇಂದ್ರ ಸರ್ಕಾರದ ಮಹಿಳಾ ಸಬಲೀಕರಣ ಯೋಜನೆಗಳ ಮಾಹಿತಿ ಕಾರ್ಯಾಗಾರಕ್ಕೆ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. 

ಕರ್ನಾಟದಲ್ಲಿ ಮತ್ತೆ ಬಿಜೆಪಿ ಪರ ಗಾಳಿ ಬೀಸುತ್ತಿದ್ದು, ಜನರ ಆರ್ಶೀರ್ವಾದ ದೊರಕಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಪಕ್ಷದ ಅಮಿತ ಷಾ ಅವರ ನಿರೀಕ್ಷೆಯಂತೆ ಮತ್ತೆ ಬಿಜೆಪಿ ಪಕ್ಷಕ್ಕೆ ಬಹುಮತ ಸಿಗಲಿದೆ. 

ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ರಷ್ಟು ಮೀಸಲಾತಿ ನೀಡುವ ಮೂಲಕ ಪುರುಷರಷ್ಟೇ ಸಮಾನ ಸ್ಥಾನ ಕಲ್ಪಿಸಿದ ಹೆಗ್ಗಳಿಗೆ ಬಿಜೆಪಿ ಪಕ್ಷಕ್ಕೆ ಇದೆ. ಹೀಗಾಗಿ ಸ್ತ್ರೀಶಕ್ತಿ ಸಂಘ, ವಿವಿಧ ಮಹಿಳಾ ಸಂಘಟನೆಗಳು ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಸಂಕಲ್ಪ ಮಾಡುವ ಮೂಲಕ ಸರಕಾರ ರಚನೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಸಿದ್ದು ದರೋಡೆ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಗಲು ದರೋಡೆ ಮೂಲಕ ರಾಜ್ಯದ ಖಜಾನೆಯನ್ನು ಲೂಟಿ ಮಾಡಿದೆ. ಬಡವರ ಹಣವನ್ನು ಸಮಾವೇಶದ ಮೂಲಕ ಪೋಲು ಮಾಡಲಾಗುತ್ತಿದೆ. ಭ್ರಷ್ಟ ಸರ್ಕಾರ ಕಿತ್ತೆಸೆದು ಬಿಜೆಪಿ ಅ ಧಿಕಾರಕ್ಕೆ ತರಲು ಮಹಿಳಾ ಮೋರ್ಚಾ ಕೇಂದ್ರದ ಯೋಜನೆಗಳನ್ನು ಗ್ರಾಮಗಳಿಗೆ ತಲುಪಿಸಬೇಕು ಎಂದು ಸಲಹೆ ನೀಡಿದರು.

Advertisement

ಮಹಿಳಾ ಮೋರ್ಚಾದ ಮೂಲಕ ವಿವಿಧ ಸಂಘಟನೆಗಳಿಗೆ ಬಿಜೆಪಿ ಶಕ್ತಿ ತುಂಬುವ ಕೆಲಸ ಮಾಡಿದೆ. ಇದೀಗ ಮೋರ್ಚಾಗಳನ್ನು ಬಲವರ್ಧನೆಗೊಳಿಸಿ, ಕೇಂದ್ರದ ಯೋಜನೆಗಳನ್ನು ಹಾಗೂ ಬಿಜೆಪಿ ಸರ್ಕಾರದ ಯೋಜನೆಗಳನ್ನು ಮನೆ-ಮನೆಗೆ ತಲುಪಿಸುವ ಕೆಲಸ ಮಾಡಬೇಕು.

ಮಹಿಳೆಯರು ಬಿಜೆಪಿಗೆ ಸಹಕಾರ ನೀಡಬೇಕು ಎಂದರು. ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷ ಭಾರತಿ ಶೆಟ್ಟಿ ಅವರು, ಕೇಂದ್ರ ಸರ್ಕಾರದ ಮಹಿಳಾ ಸಬಲೀಕರಣದ  ಉಜ್ವಲಾ, ಮುದ್ರಾ, ಭೇಟಿ ಬಚಾವೋ, ಭೇಟಿ ಪಡಾವೋ, ಶೌಚಾಲಯ ಬಿಜೆಪಿ ಸರ್ಕಾರದ ಭಾಗ್ಯಲಕೀ, ಸೈಕಲ್‌ ವಿತರಣೆ ಇತ್ಯಾದಿ ಯೋಜನೆಗಳ ಕುರಿತು ಮಾಹಿತಿ ನೀಡಿದರು. 

ಶಾಸಕಿ ಶಶಿಕಲಾ ಜೊಲ್ಲೆ ಅಧ್ಯಕ್ಷತೆ ವಹಿಸಿದ್ದರು. ಜಗದೀಶ ಶೆಟ್ಟರ, ಪ್ರಹ್ಲಾದ ಜೋಶಿ, ಅರವಿಂದ ಬೆಲ್ಲದ, ಪ್ರದೀಪ ಶೆಟ್ಟರ, ಪೂರ್ಣಾ ಪಾಟೀಲ, ಮಂಜುಳಾ ಅಕ್ಕೂರ, ರೂಪಾ ಈರೇಶನವರ, ಅನಸೂಯಾ ಹಿರೇಮಠ, ಚಂದ್ರಕಲಾ ಚೌಧರಿ ಅನೇಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next