Advertisement

ಬಿಜೆಪಿ ಅಭ್ಯರ್ಥಿ ಆಯ್ಕೆಗೆ ತೀವ್ರ ಕಸರತ್ತು​​​​​​​

06:10 AM Apr 05, 2018 | |

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ಆರಂಭಗೊಂಡಿದ್ದು, ಬುಧವಾರ ನಗರ ಹೊರವಲಯದ
ರೆಸಾರ್ಟ್‌ನಲ್ಲಿ ನಡೆದ ಸಭೆಯಲ್ಲಿ ಸುಮಾರು 73 ಕ್ಷೇತ್ರಗಳ ಅಭಿಪ್ರಾಯ ಸಂಗ್ರಹಿಸಲಾಯಿತು. 3ದಿನದ ಸಭೆಯಲ್ಲಿ
ಮೊದಲ ದಿನ ಬೆಂಗಳೂರು ನಗರದ ವಿಧಾನಸಭಾ ಕ್ಷೇತ್ರಗಳು ಹಾಗೂ ಬೀದರ್‌, ಬಳ್ಳಾರಿ, ರಾಯಚೂರು, ಕೊಪ್ಪಳ,
ಯಾದಗಿರಿ ಜಿಲ್ಲೆಗಳ ವ್ಯಾಪ್ತಿಗೆ ಬರುವ ಕ್ಷೇತ್ರಗಳ ಆಕಾಂಕ್ಷಿಗಳು ಹಾಗೂ ಮುಖಂಡರಿಂದ ಮಾಹಿತಿ ಪಡೆಯಲಾಯಿತು.

Advertisement

ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್‌ ಜಾವಡೇಕರ್‌, ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.
ಸಂತೋಷ್‌, ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ಶೋಭಾ ಕರಂದ್ಲಾಜೆ,ಅರವಿಂದ ಲಿಂಬಾವಳಿ, ಎನ್‌.ರವಿಕುಮಾರ್‌ ಸಮ್ಮುಖದಲ್ಲಿ ಪ್ರತಿ ಕ್ಷೇತ್ರದ ಪದಾಧಿಕಾರಿಗಳು, ಆಹ್ವಾನಿತ ಆಕಾಂಕ್ಷಿಗಳು,ಇತರ ನಾಯಕರು ತಮ್ಮ ಅಭಿಪ್ರಾಯ ಹಂಚಿಕೊಂಡರು.

ಮೂಲಗಳ ಪ್ರಕಾರ, ಬೆಂಗಳೂರು ನಗರದ 11 ಹಾಲಿ ಶಾಸಕರಿಗೆ ಟಿಕೆಟ್‌ ಪಕ್ಕಾ ಆಗಿದೆ. ಬಳ್ಳಾರಿ ನಗರಕ್ಕೆ ಸೋಮ
ಶೇಖರರೆಡ್ಡಿ, ಗ್ರಾಮಾಂತರ ಕ್ಷೇತ್ರಕ್ಕೆ ಶ್ರೀರಾಮುಲು, ಕಂಪ್ಲಿ ಕ್ಷೇತ್ರಕ್ಕೆ ಸುರೇಶ್‌ಬಾಬು, ವಿಜಯನಗರಕ್ಕೆ ಗವಿಯಪ್ಪ ಹೆಸರು ಅಂತಿಮಗೊಳಿಸಲಾಗಿದೆ. ಸರಣಿ ಸಭೆ ಏ.7 ರವರೆಗೆ ಮುಂದುವರಿಯಲಿದ್ದು, ಮೊದಲ ಹಂತದಲ್ಲಿ 100 ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಿ ಕೇಂದ್ರ ಸಮಿತಿಗೆ ರವಾನಿಸಲಾಗುವುದು ಎನ್ನಲಾಗಿದೆ. ಶ್ರೀರಾಮುಲು ಹೆಸರು ಸಂಡೂರು- ಕೂಡ್ಲಿಗಿ ಕ್ಷೇತ್ರಕ್ಕೂ ಪರಿಗಣಿಸಬಹುದು ಎಂದು ಹೇಳಲಾಗಿದೆ. ಬೀದರ್‌ ಜಿಲ್ಲೆಯ ಮುಖಂಡರ ಸಭೆ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖೂಬಾಗೆ ಟಿಕೆಟ್‌ ಕೊಡಬಾರದು ಎಂದು ವಿರೋಧ ವ್ಯಕ್ತವಾಯಿತು.

ಬಳ್ಳಾರಿ ಜಿಲ್ಲಾ ನಾಯಕರ ಅಭಿಪ್ರಾಯ ಸಂಗ್ರಹ ಸಂದರ್ಭ ಜನಾರ್ದನ ರೆಡ್ಡಿ ಪರ ನಾಯಕರು ಬ್ಯಾಟಿಂಗ್‌ ನಡೆಸಿದರು.

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಕಳಂಕಿತರಿಗೆ ಟಿಕೆಟ್‌ ನೀಡುವ ಪ್ರಶ್ನೆಯೇ ಇಲ್ಲ. ಕಳಂಕಿತರಿಗೆ ಟಿಕೆಟ್‌ ಕೊಡಬಾರದು ಎಂಬುದು ಪಕ್ಷ ನಿಲುವು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಆಕಾಂಕ್ಷಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ಇದ್ದರೆ ಆ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ನಿರ್ಧಾರ ಕೈಗೊಳ್ಳಲಿದ್ದಾರೆ.
–  ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

Advertisement
Advertisement

Udayavani is now on Telegram. Click here to join our channel and stay updated with the latest news.

Next