Advertisement

ಮಹಾರಾಷ್ಟ್ರದಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆ

06:00 AM Jul 23, 2018 | |

ನವದೆಹಲಿ: ಅವಿಶ್ವಾಸ ಗೊತ್ತುವಳಿ ಮಂಡನೆಯಲ್ಲಿ ಭಾಗವಹಿಸಿದ ಶಿವಸೇನೆ, ಇನ್ನೊಂದೆಡೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮಾಡಿದ ಭಾಷಣವನ್ನು ಹೊಗಳಿದೆ. ಇದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಸಿಟ್ಟಿಗೆ ಕಾರಣವಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಶಿವಸೇನೆ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದಾರೆ. 

Advertisement

ಮಹಾರಾಷ್ಟ್ರದಲ್ಲಿ ಲೋಕಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲು ಸಜ್ಜಾಗುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ. ಇದಕ್ಕಾಗಿ ಶಾ 23 ಅಂಶಗಳ ಕಾರ್ಯಯೋಜನೆಯನ್ನೂ ಸಿದ್ಧಪಡಿಸಿ, ಕಾರ್ಯಕರ್ತರೊಂದಿಗೆ ಹಂಚಿಕೊಂಡಿದ್ದಾರೆ.

ರಾಜ್ಯದ ಎಲ್ಲ ಸಾಮಾಜಿಕ ಮಾಧ್ಯಮ ಗ್ರೂಪ್‌ಗ್ಳನ್ನು ಪುನಃ ಸಕ್ರಿಯಗೊಳಿಸುವಂತೆ ಸೂಚಿಸಲಾಗಿದ್ದು, ಏಕ್‌ ಬೂತ್‌, 25 ಯೂತ್‌ (ಒಂದು ಮತಗಟ್ಟೆ, 25 ಯುವಕರು) ಎಂಬ ಫಾರ್ಮುಲಾ ಅಡಿಯಲ್ಲಿ  ಕೆಲಸಮಾಡುವಂತೆ ಸೂಚಿಸಿದ್ದಾರೆ. ಪ್ರತಿ  ಮತಗಟ್ಟೆಯಲ್ಲೂ ಬೈಕ್‌ ಹೊಂದಿರುವ ಕನಿಷ್ಠ 5 ಕಾರ್ಯಕರ್ತರನ್ನು ನೇಮಿಸಬೇಕು. ಪ್ರತಿ ದೇವಸ್ಥಾನ, ಮಸೀದಿ ಹಾಗೂ ಚರ್ಚ್‌ಗಳ ಮುಖ್ಯಸ್ಥರನ್ನು ಸಂಪರ್ಕಿಸಬೇಕು. ವಿಪಕ್ಷಗಳ ಸಾಮರ್ಥ್ಯ ಹಾಗೂ ಸಮಸ್ಯೆಯನ್ನು ಪಟ್ಟಿ ಮಾಡಬೇಕು ಎಂದು ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next