Advertisement

ಬಿಜೆಪಿಯದು ಕೀಳು ಮಟ್ಟದ ರಾಜಕಾರಣ

06:35 AM Feb 10, 2018 | Team Udayavani |

ಬೆಂಗಳೂರು: ತಮ್ಮ ವಿರೋಧಿಗಳನ್ನು ಮಟ್ಟಹಾಕಲು ಆದಾಯ ತೆರಿಗೆ ಇಲಾಖೆಯಂತಹ ಸರ್ಕಾರಿ ಯಂತ್ರಗಳನ್ನು ಬಿಜೆಪಿ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ.

Advertisement

ಇಷ್ಟು ಕೀಳುಮಟ್ಟದ ರಾಜಕಾರಣವನ್ನು ಹಿಂದೆ ಯಾರೂ ಮಾಡಿರಲಿಲ್ಲ. ಅಮಿತ್‌ ಶಾ ಅವರ ಹೇಡಿತನ ಇಲ್ಲಿ ಪ್ರದರ್ಶನವಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ವಾಗ್ಧಾಳಿ ನಡೆಸಿದರು.

ನಗರದ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ “ನನ್ನ ಕರ್ನಾಟಕ’ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ಮಾಜಿ ಪ್ರಧಾನಿ ವಾಜಪೇಯಿ ಕಾಲದಲ್ಲೂ ಈ ಮಟ್ಟದ ದ್ವೇಷ ರಾಜಕಾರಣ ಹಾಗೂ ಸರ್ಕಾರಿ ಯಂತ್ರಗಳ ದುರುಪಯೋಗ ನಡೆದಿರಲಿಲ್ಲ ಎಂದು ವಾಗ್ಧಾಳಿ ನಡೆಸಿದರು. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸ್ಲಂನಲ್ಲಿ ವಾಸ್ತವ್ಯ ಮಾಡಲು ಯಡಿಯೂರಪ್ಪ ಮುಂದಾಗಿದ್ದಾರೆ. ಅದಕ್ಕೆ ಬೇಕಾದ ವ್ಯವಸ್ಥೆಯನ್ನು ನಾನೇ ಮಾಡಿಕೊಡುತ್ತೇನೆ ಎಂದು ಟೀಕಿಸಿದರು.

ಬಿಎಸ್‌ವೈ ಕಿಡಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೆ ಐಟಿ, ಇಡಿ ದಾಳಿಗಳ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಕಿಡಿಕಾರಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ದಿನೇಶ್‌ ಗುಂಡೂರಾವ್‌ ನೀಡಿರುವ ಹೇಳಿಕೆಯನ್ನು ಕಟುವಾಗಿ ಖಂಡಿಸುತ್ತೇನೆ. ಇಂತಹ ಹೇಳಿಕೆಗಳ ಮೂಲಕ ಸಾರ್ವಜನಿಕ ಜೀವನದಲ್ಲಿ ತಾವು ಅಯೋಗ್ಯ ಎಂಬುದನ್ನು ಅವರೇ ಸಾಬೀತುಪಡಿಸಿದ್ದಾರೆ. ಇಂತಹ ಮೂರ್ಖ ಮುಖಂಡರನ್ನು ರಾಜ್ಯ ಹಿಂದೆಂದೂ ಕಂಡಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next