Advertisement

ಬಿಜೆಪಿಗೆ ಎಚ್‌ಡಿಕೆ ಎದಿರೇಟು: ರೇವಣ್ಣ 

06:40 AM Sep 15, 2018 | |

ಹಾಸನ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಮುಂದಾದರೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ತಕ್ಕ ಎದಿರೇಟು  ನೀಡಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅವರು ಹೇಳಿದರು. 

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಈ ಸರ್ಕಾರವನ್ನು ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಜೆಡಿಎಸ್‌ನಲ್ಲಿ ಯಾವುದೇ ಗೊಂದಲವಿಲ್ಲ. ಕಾಂಗ್ರೆಸ್‌ನಲ್ಲಿರುವ ಎಲ್ಲ ಗೊಂದಲಗಳನ್ನು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ನಿವಾರಿಸಿ, ಸರ್ಕಾರ ಸುಭದ್ರವಾಗಿ ನಡೆಯುವಂತೆ ನೋಡಿಕೊಳ್ಳಲಿದ್ದಾರೆ. 

ಬಿಜೆಪಿಯವರು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರನ್ನು ಸೆಳೆಯಲು ಪ್ರಯತ್ನ ನಡೆಸಿದ್ದಾರೆ. ಆದರೆ, ಬಿಜೆಪಿಯ ಕೆಲವು ಶಾಸಕರು ಜೆಡಿಎಸ್‌ ಸಂಪರ್ಕದಲ್ಲಿದ್ದಾರೆ. ಬಿಜೆಪಿಯವರು ಸರಕಾರ ಅಸ್ಥಿರಗೊಳಿಸಲು ಮುಂದಾದರೆ, ಕುಮಾರಸ್ವಾಮಿ ಅವರು ಅದಕ್ಕೆ ತಕ್ಕ ಉತ್ತರ ಕೊಡಲಿದ್ದಾರೆ ಎಂದು ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next