ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ತಮಗೆ ಬೇಕಾದ ಒಂದಿಬ್ಬರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ಬಿಜೆಪಿ ಎಂಬುದು “ಪ್ರೈವೇಟ್ ಲಿಮಿಟೆಡ್ ಕಂಪನಿ’ ಅಲ್ಲ. ಸಂಘಟನೆ ಹೊಂದಿರುವ ರಾಷ್ಟ್ರೀಯ ಪಕ್ಷ ಎಂದು ಕಿಡಿಕಾರಿದ್ದಾರೆ. ಅಲ್ಲದೆ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಹೇಳಿಕೆ ನೀಡಿರುವುದಕ್ಕೆ ಯಡಿಯೂರಪ್ಪ
ಅವರು ಕ್ಷಮೆ ಕೇಳಲೇ ಬೇಕು ಎಂದು ಆಗ್ರಹಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‌ವೈ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು. “ಎಲ್ಲರೂ ಒಂದಾಗಿ ಕೆಲಸ ಮಾಡಬೇಕೆಂಬುದು ನಮ್ಮೆಲ್ಲರ ಅಪೇಕ್ಷೆ. ಆದರೆ, ತಮಗೆ ಬೇಕಾದ ಇಬ್ಬರು, ಮೂವರೊಂದಿಗೆ ಮಾತ್ರ ಯಡಿಯೂರಪ್ಪ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಿದ್ದಾರೆ. ಇದು ನಿಷ್ಠಾವಂತ ಕಾರ್ಯಕರ್ತರಿಗೆ ಬೇಸರ ತರಿಸಿದೆ. ಯಡಿಯೂರಪ್ಪನವರಿಗೆ ರಾಜ್ಯದ ನಾಯಕತ್ವ ವಹಿಸಿ, ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿದೆ.
Advertisement
ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲು ಅನಂತಕುಮಾರ್, ಶೆಟ್ಟರ್, ಪ್ರಹ್ಲಾದ್ ಜೋಶಿ ಮೊದಲಾದವರನ್ನೊಳಗೊಂಡ ಕೋರ್ ಕಮಿಟಿ ರಚಿಸಲಾಗಿದೆ. ಆದರೆ, ಈ ಕಮಿಟಿಯಲ್ಲಿ ಕುಳಿತು ಚರ್ಚಿಸದೆ ತಮಗೆಬೇಕಾದ ಮೂರ್‍ನಾಲ್ಕು ಮಂದಿಯೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದು ಸರಿಯಲ್ಲ. ತಾವು ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಯಡಿಯೂರಪ್ಪನವರು ಕೂಡ ಪ್ರತಿಷ್ಠೆಯಾಗಿ ತೆಗೆದುಕೊಳ್ಳಬಾರದು. ಅವರು ರಾಜ್ಯಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ. ಸಂಘಟನೆಯ ಸಕಾರಾತ್ಮಕ ಚಿಂತನೆಯೊಂದಿಗೆ ಪಕ್ಷವನ್ನು
ಅಧಿಕಾರಕ್ಕೆ ತರಬೇಕಿದೆ’ ಎಂದರು.
ಕಾರಣ ಎಂದು ಯಡಿಯೂರಪ್ಪ ಹೇಳಿದ್ದಾರೆ. ಸಂತೋಷ್ ರಾಜಕಾರಣಿಯಲ್ಲ, ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.
ಅವರ ವಿರುದ್ಧ ಹೇಳಿಕೆ ನೀಡಿರುವುದಕ್ಕೆ ಯಡಿಯೂರಪ್ಪ ಅವರು ಕ್ಷಮೆ ಕೇಳಬೇಕು ಎಂದರು. ಪಕ್ಷದಲ್ಲಿನ ಗೊಂದಲ ಹಾಗೂ ಪದಾಧಿಕಾರಿಗಳ ನೇಮಕ ಕುರಿತಂತೆ ಎದ್ದಿರುವ ವಿವಾದ ಬಗೆಹರಿಸಲು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೇ ಸಮಿತಿ ರಚನೆ ಮಾಡಿದ್ದಾರೆ. ಆದರೆ, ಇದುವರೆಗೂ ಸಭೆ ನಡೆಸಿಲ್ಲ. ಬೀದಿ ಜಗಳ ಮಾಡಬೇಡಿ, ಗೊಂದಲ ಸೃಷ್ಟಿಸಬೇಡಿ ಎಂದು ಹೇಳುತ್ತಾರೆ. ಆದರೆ, ಇದುವರೆಗೂ ಗೊಂದಲ ಬಗೆಹರಿಸಲು ಮುಂದಾಗಲಿಲ್ಲ ಎಂದರೆ ನಾವೇನು ಮಾಡೋಣ? ಹೀಗಾದರೆ ವರಿಷ್ಟರಿಗೆ ಏನು ಬೆಲೆ ನೀಡಿದಂತಾಗುತ್ತದೆ’ ಎಂದು ಪ್ರಶ್ನಿಸಿದರು.
Related Articles
Advertisement