Advertisement
ಚುನಾವಣೆಗೆ ಹೆಚ್ಚಿನ ಸಮಯಾವಕಾಶ ಇರದಿರುವುದರಿಂದ ಚುನಾವಣೆ ಕಾವು ಮತ್ತಷ್ಟು ಹೆಚ್ಚಿದೆ. ತಿಂಗಳೊಳಗೆ ಅಂದರೆ ಡಿ.10ರಂದು ಚುನಾವಣೆ ನಡೆದು, ಡಿ.14ರಂದು ಮತ ಎಣಿಕೆ ನಡೆಯಲಿದೆ. ಹಾಲಿ ಸದಸ್ಯ ಬಿಜೆಪಿಯ ಬಿ.ಜಿ.ಪಾಟೀಲ ಅವಧಿ ಮುಕ್ತಾಯವಾಗುತ್ತಿದ್ದು, ಈಗಾಗಲೇ ಎರಡ್ಮೂರು ಸಭೆ ನಡೆಸಿ, ಆತ್ಮಾವಲೋಕನ ನಡೆಸಲಾಗಿದೆ. ಅಂದರೆ ಬಿಜೆಪಿ ವಿಧಾನ ಪರಿಷತ್ ಚುನಾವಣೆ ಸಂಬಂಧ ಈಗಾಗಲೇ ಸಿದ್ಧವಾಗಿರುವುದು ಇದರಿಂದ ಸ್ಪಷವಾಗುತ್ತದೆ.
Related Articles
Advertisement
ಮತದಾರರು ಎಷ್ಟು?
ಕಲಬುರಗಿ-ಯಾದಗಿರಿ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಇಬ್ಬರು ಸಂಸದರು, ಓರ್ವ ರಾಜ್ಯಸಭೆ ಸದಸ್ಯ, 9 ಶಾಸಕರು, ಐವರು ವಿಧಾನ ಪರಿಷತ್ ಸದಸ್ಯರು, 4447 ಗ್ರಾಪಂ ಸದಸ್ಯರು ಸೇರಿದಂತೆ ನಗರಸಭೆ, ಪಪಂ ಸದಸ್ಯರು ಮತದಾನದ ಹಕ್ಕು ಹೊಂದಿದ್ದಾರೆ. ಆದರೆ 47 ಜಿಪಂ ಸದಸ್ಯರು ಹಾಗೂ 179 ತಾಪಂ ಸದಸ್ಯರ ಅವಧಿ ಮುಕ್ತಾಯ ಆಗಿದ್ದರಿಂದ ಚುನಾವಣೆ ನಡೆದು ಯಾರೂ ಆಯ್ಕೆಯಾಗದ ಹಿನ್ನೆಲೆಯಲ್ಲಿ ಇವರು ಮತದಾನದಿಂದ ಹೊರಗೆ ಉಳಿಯುವಂತೆ ಆಗಿದೆ.
ಇದನ್ನೂ ಓದಿ: ಕ್ಲೋರಿನ್ ಅನಿಲ ಸೋರಿಕೆಯಿಂದ ಅಗ್ನಿಶಾಮಕ ದಳದ 6 ಮಂದಿ ಅಸ್ವಸ್ಥ
ಜಿಪಂ ಹಾಗೂ ತಾಪಂ ಸದಸ್ಯರೇ ಇಲ್ಲದಿರುವಾಗ ಚುನಾವಣೆ ನಡೆಯುತ್ತಿರುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದ್ದು, ಟೀಕೆಗಳು ಕೇಳಿಬರುತ್ತಿವೆ. ಮುಂದೆ ಆಯ್ಕೆಯಾಗುವ ಸದಸ್ಯರು ಒಮ್ಮೆಯೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತದಾನ ಮಾಡದೇ ದೂರ ಉಳಿಯುವ ಸಾಧ್ಯತೆಗಳೇ ಹೆಚ್ಚಾಗಿ ಕಂಡು ಬರುತ್ತಿದೆ. ಒಟ್ಟಾರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆ ರಾಜಕೀಯ ಸಂಚಲನ ಮೂಡಿದ್ದಂತೂ ಖರೇ.
ಮತ್ತೊಮ್ಮೆ ಸ್ಪರ್ಧಿಸುವ ಬಯಕೆ ಹೊಂದಿದ್ದೇವೆ. ಪಕ್ಷದ ವರಿಷ್ಠರು ಹಸಿರು ನಿಶಾನೆ ತೋರಿದರೆ ಸ್ಪರ್ಧೆಗೆ ಮುಂದಾಗಲಾಗುವುದು. ಒಟ್ಟಾರೆ ಪಕ್ಷದ ಯಾವುದೇ ತೀರ್ಮಾನಕ್ಕೆ ಬದ್ಧತೆ ಹೊಂದಿದ್ದೇವೆ. -ಬಿ.ಜಿ.ಪಾಟೀಲ, ವಿಧಾನ ಪರಿಷತ್ ಸದಸ್ಯ (ಬಿಜೆಪಿ)
ಕಲಬುರಗಿ-ಯಾದಗಿರಿ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್ ಸದಸ್ಯ ಸ್ಥಾನದ ಚುನಾವಣೆ ಸಂಬಂಧ ಕಾಂಗ್ರೆಸ್ ವತಿಯಿಂದ ಯಾವುದೇ ಸಭೆ ನಡೆಸಿಲ್ಲ. ಸ್ಪರ್ಧಾಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ವಾರದೊಳಗೆ ಸಭೆ ನಡೆಸಿ ಸ್ಪರ್ಧಿಸುವ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. -ಜಗದೇವ ಗುತ್ತೇದಾರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ
ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಕ್ಷದ ವರಿಷ್ಠರು ಒಳಗೊಂಡ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಪ್ರವಾಸ ರಾಜ್ಯದ 30 ಜಿಲ್ಲೆಗಳಲ್ಲೂ ಪ್ರವಾಸ ಮಾಡಲಿದ್ದು, ಪ್ರಮುಖವಾಗಿ ಜಿಲ್ಲೆಗೊಂದು ಪಂಚಾಯತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. -ರಾಜಕುಮಾರ ಪಾಟೀಲ ತೇಲ್ಕೂರ, ಬಿಜೆಪಿ ರಾಜ್ಯ ವಕ್ತಾರ
-ಹಣಮಂತರಾವ ಭೈರಾಮಡಗಿ