ಜನರಲ್ಲಿ ಭ್ರಮೆ ಸೃಷ್ಟಿಸಿದ್ದಾರೆ. ಅಚ್ಚೆದಿನ್ ಹೆಸರಿನಲ್ಲಿ ಪ್ರಧಾನಿ ಮೋದಿ ಅವರು ಸುಳ್ಳು ಸಾರಿದ್ದಾರೆ ಎಂದು ಐಟಿಬಿಟಿ
ಹಾಗೂ ಪ್ರವಾಸೋದ್ಯಮ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
Advertisement
ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ 32 ಕೋಟಿ ರೂ. ಅನುದಾನದ 76 ಅಭಿವೃದ್ಧಿ ಕಾಮಗಾರಿಉದ್ಘಾಟನೆ ಹಾಗೂ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು. ಬುದ್ಧ, ಬಸವ ಹಾಗೂ ಅಂಬೇಡ್ಕರ್ ತತ್ವಗಳ ಮೇಲೆ ನಡೆಯುತ್ತಿರುವ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದು ಜನರಿಗೆ ಸಚ್ಚೆದಿನ್ ಕೊಟ್ಟಿದೆ. ಬಿಜೆಪಿ ಸುಳ್ಳಿನ ರಾಜಕೀಯ ಮಾಡುತ್ತಿದೆ. ವಾಡಿ ಅಭಿವೃದ್ಧಿಗೆ ನಾನು 83 ಕೋಟಿ ಅನುದಾನ ನೀಡಿದ್ದೇನೆ ಎಂದು ಹೇಳಿದರು.
ಮೈನಾಬಾಯಿ ಗೋಪಾಲ ರಾಠೊಡ, ಉಪಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಮುಖ್ಯಾಧಿಕಾರಿ ಕೆ. ಮಲ್ಲೇಶ, ತಾಪಂ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ, ಜಿಪಂ ಸದಸ್ಯರಾದ ಶಿವುರುದ್ರ ಭೀಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೆಮೂದ್ ಸಾಹೇಬ, ಭೀಮಣ್ಣ ಸಾಲಿ, ಜಾಫರ್ ಪಟೇಲ, ಶಂಕ್ರಯ್ಯಸ್ವಾಮಿ, ಶರಣು ನಾಟೀಕಾರ, ಬಶೀರ್ ಖುರೇಶಿ, ಭೀಮಶಾ ಜಿರೊಳ್ಳಿ, ವೀರಣ್ಣಗೌಡ ಪರಸರೆಡ್ಡಿ, ಅಣ್ಣಾರಾಯಗೌಡ ಪಾಟೀಲ ಪಾಲ್ಗೊಂಡಿದ್ದರು.
Related Articles
Advertisement
ಪ್ರತಿಭಟನೆ: ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರು ದಲಿತಸೇನೆ ಕಾರ್ಯಕರ್ತರ ಪ್ರತಿಭಟನೆ ಎದುರಿಸಬೇಕಾಯಿತು. ಸೇನೆ ಜಿಲ್ಲಾ ಉಪಾಧ್ಯಕ್ಷ ಶ್ರವಣಕುಮಾರ ಮೌಸಲಗಿ
ನೇತೃತ್ವದಲ್ಲಿ ಸಚಿವರಿಗೆ ಮನವಿ ಕೊಡಲು ಮುಂದಾದ ಕಾರ್ಯಕರ್ತರು, ಸ್ಥಳೀಯ ಎಸಿಸಿ ಸಿಮೆಂಟ್ ಕಂಪನಿಯಲ್ಲಿ
ಯುವಕರಿಗೆ ಉದ್ಯೋಗ ಕೊಡಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು. ಪೊಲೀಸರು ಪ್ರತಿಭಟನಾಕಾರರನ್ನು
ಚದುರಿಸಿದರು .