Advertisement

ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ

07:25 AM Nov 28, 2017 | |

ಬೆಂಗಳೂರು: ಸಚಿವರಾದ ಕೆ.ಜೆ.ಜಾರ್ಜ್‌ ಹಾಗೂ ವಿನಯ ಕುಲಕರ್ಣಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೋಮವಾರ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸಿತು.

Advertisement

ಹಾವೇರಿಯ ಗಾಂಧಿ ವೃತ್ತದಲ್ಲಿ ಪ್ರತಿಭಟ ನಾಕಾರರನ್ನುದ್ದೇಶಿಸಿ ಮಾತನಾಡಿದ ಪಕ್ಷದರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಸಚಿವ ವಿನಯ ಕುಲಕರ್ಣಿ ಅವರು ಡಿವೈಎಸ್‌ಪಿ ಸುಲ್ಫಿ ಮೂಲಕ ಜಿಪಂ ಸದಸ್ಯ ಯೋಗೀಶ್‌ ಗೌಡ ಅವರ ಪತ್ನಿ ಮತ್ತು ಕುಟುಂಬಸ್ಥರ ಮೇಲೆ ಒತ್ತಡ ಹಾಕಿದ್ದು ಮತ್ತು ಕೆಂಪಯ್ಯ ಅವರು ಕೂಡ ರಾಜಿ ಸಂಧಾನಕ್ಕೆ ಮಧ್ಯಸ್ಥಿಕೆ ವಹಿಸಿದ್ದು ನೋಡಿದರೆ  ವಿನಯ ಕುಲಕರ್ಣಿ ಅವರ ಕೈವಾಡ ಈ ಕೊಲೆಯಲ್ಲಿ ಇದೆ ಎಂದುಕಂಡು ಬರುತ್ತದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಕೂಡಲೆ ಕೆ.ಜೆ. ಜಾರ್ಜ್‌ ಮತ್ತು ವಿನಯ ಕುಲಕರ್ಣಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಕೊಲೆಗಡುಕ ಸಚಿವರ ರಕ್ಷಣೆಗೆ ನಿಂತಿರುವ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ಒಂದು ಕ್ಷಣ ಅಧಿಕಾರದಲ್ಲಿರುವ ನೈತಿಕ ಹಕ್ಕು ಉಳಿಸಿಕೊಂಡಿಲ್ಲ ಎಂದರು.

ಬಿಜೆಪಿ ಕಾರ್ಯಕರ್ತರು ಮೈಸೂರಿನ ಗಾಂಧಿಚೌಕದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಇನ್ನು, ಮಂಡ್ಯ, ತುಮಕೂರು, ಕೋಲಾರ, ಹಾಸನ, ಕಾರವಾರ, ಧಾರವಾಡ, ಬಾಗಲಕೋಟೆ, ವಿಜಯಪುರ ಸೇರಿ ಹಲವೆಡೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next