Advertisement

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವೆ

11:48 AM Dec 03, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಲ್ಲಿ ಖಾಸಗಿ ಚಾನೆಲ್‌ವೊಂದರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ಬಗ್ಗೆ ನನಗೆ ನನ್ನದೇ ಆದ ದೂರದೃಷ್ಟಿತ್ವ ಇದೆ.

Advertisement

ಹಲವಾರು ಯೋಜನೆಗಳಿವೆ. ಚುನಾವಣೆಗೆ ಇನ್ನೂ ಒಂದು ವರ್ಷಕ್ಕೂ ಹೆಚ್ಚು ಸಮಯ ಬಾಕಿ ಇದ್ದು , 2023ರ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದು ತಿಳಿಸಿದರು. ನಾನು ಜನರ ಜತೆ ನಿಕಟ ಸಂಪರ್ಕ ಹೊಂದಿದ್ದೇನೆ. ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದೇನೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೂಮ್ಮೆ ಜಯಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ಮುಖ್ಯಮಂತ್ರಿಗಳಾಗಿ ನಾಲ್ಕು ತಿಂಗಳ ತಮ್ಮ ಅನುಭವವನ್ನು ಬಿಚ್ಚಿಟ್ಟ ಮುಖ್ಯಮಂತ್ರಿಗಳು, ಸಾಮಾನ್ಯವಾಗಿ ಮುಖ್ಯಮಂತ್ರಿಗಳ ಕುರ್ಚಿ ಹಾಟ್‌ ಸೀಟ್‌ ಎಂದೇ ಗುರುತಿಸಲಾಗಿದೆ. ಆದರೆ, ನಾವು ಉತ್ತಮ ಕೆಲಸ ಮಾಡುತ್ತಿದ್ದರೆ, ಕುರ್ಚಿಯ ಬಿಸಿ ತಗ್ಗುತ್ತದೆ.

ಇದನ್ನೂ ಓದಿ:-ಹೊಂಡಗುಂಡಿ ರಸ್ತೆ; ಆ್ಯಂಬುಲೆನ್ಸ್‌ನಲ್ಲಿ ವಿಚಿತ್ರ ಹೆರಿಗೆ !

ಮುಖ್ಯಮಂತ್ರಿಯ ಕುರ್ಚಿಯ ಮೇಲೆ ಕುಳಿತುಕೊಳ್ಳುವ ವ್ಯಕ್ತಿಯನ್ನು ಪರಿಸ್ಥಿತಿಗಳೂ ಒಗ್ಗಿಸುತ್ತವೆ ಎಂದು ತಿಳಿಸಿದರು. ಐದು ಮುಖ್ಯಮಂತ್ರಿಗಳೊಂದಿಗೆ ಕೆಲಸ ಮಾಡಿರುವ ನಿಮ್ಮ ಅನುಭವಕ್ಕೂ ಪ್ರಸ್ತುತ ಮುಖ್ಯಮಂತ್ರಿಯಾಗಿರು ವುದಕ್ಕೂ ವ್ಯತ್ಯಾಸವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಎಲ್ಲಾ ಹಿರಿಯ ನಾಯಕರೂ ಜನನಾಯಕರಾಗಿದ್ದವರು, ಪ್ರತಿಯೊಬ್ಬರಿಗೂ ತಮ್ಮದೇ ರೀತಿಯ ವ್ಯಕ್ತಿತ್ವ ಹಾಗೂ ಆಡಳಿತ ಶೈಲಿಯಿತ್ತು.

Advertisement

ಕೆಲವು ಪರಿಸ್ಥಿತಿಗಳನ್ನು ಎದುರಿಸಲು ಇದು ನನಗೆ ಅನುಕೂಲ ವಾಯಿತು. ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಒಬ್ಬ ಅತ್ಯುತ್ತಮ ಜನ ನಾಯಕರು, ಶ್ರಮಜೀವಿ ಹಾಗೂ ಸೂಕ್ಷ್ಮ ಸ್ವಭಾವದವರು. ಅವರಿಂದ ಆಡಳಿತ ಮತ್ತು ರಾಜಕೀಯದ ಕುರಿತು ಸಾಕಷ್ಟು ಕಲಿತಿದ್ದೇನೆ.

ಇವೆಲ್ಲವೂ ಬದಲಾವಣೆಯನ್ನು ಸರಾಗವಾಗಿಸಿವೆ ಎಂದು ಹೇಳಿದರು. ರಾಜ್ಯದಲ್ಲಿ ಡಿಸೆಂಬರ್‌ನಲ್ಲಿ ಕೆಲವು ಸಚಿವರ ಬದಲಾವಣೆ ಮಾಡುವ ಬಗ್ಗೆ ಯಾವ ಆಧಾರದಲ್ಲಿ ಶಾಸಕ ಬಸನಗೌಡ ಪಾಟೀಲ್‌ ಹೇಳಿದ್ದಾರೋ ಗೊತ್ತಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ದೂರವಾಣಿ ಮೂಲಕ ಹುಟ್ಟು ಹಬ್ಬದ ಶುಭಾಶಯ ಕೋರಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಲ್ಯಾಬ್‌ ರಿಪೋರ್ಟ್‌ ಬಂದಿಲ್ಲ

ರಾಜ್ಯದಲ್ಲಿ ಪತ್ತೆಯಾದ ಒಮಿಕ್ರಾನ್‌ ಪ್ರಕರಣಗಳ ಸಂಬಂಧ ಇನ್ನೂ ಲ್ಯಾಬ್‌ ರಿಪೋರ್ಟ್‌ ಬಂದಿಲ್ಲ. ಈ ಬಗ್ಗೆ ರಾಜ್ಯದ ಆರೋಗ್ಯ ಸಚಿವರ ಜೊತೆಗೆ ಮಾತನಾಡಿದ್ದೇನೆ. ಕೇಂದ್ರದಿಂದ ಸಂಪೂರ್ಣ ವರದಿ ಪಡೆಯಲು ಸೂಚಿಸಿದ್ದೇನೆ. ಶುಕ್ರವಾರ ವಿಶೇಷ ಸಭೆ ನಡೆಸಲು ತೀರ್ಮಾನಿಸಲಾಗಿದ್ದು, ಈ ರೀತಿಯ ಹೊಸ ತಳಿ ವೈರಸ್‌ ಬಂದಾಗ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎನ್ನುವ ಕುರಿತು ತಜ್ಞರೊಂದಿಗೆ ಚರ್ಚಿಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು.

ಇದುವರೆಗೂ ಪ್ರಾಥಮಿಕ ಮಾಹಿತಿ ಪ್ರಕಾರ ದೊಡ್ಡ ಪ್ರಮಾಣದ ಹಾನಿ ಮಾಡುವ ರೋಗ ಇದಲ್ಲ ಎಂದು ಹೇಳಲಾಗುತ್ತಿದೆ. ಇದರ ಬಗ್ಗೆ ವಿವರವಾದ ಲ್ಯಾಬ್‌ ರಿಪೋರ್ಟ್‌ ಬಂದ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next