Advertisement

ದಲಿತರ ಮತ ಬಿದ್ದರೆ ಬಿಜೆಪಿ ಗೆಲುವು

11:54 AM Mar 15, 2018 | Team Udayavani |

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌.ಯಡಿಯೂರಪ್ಪ ಅವರ ಸಂಪುಟದಲ್ಲಿ ದಲಿತ ಸಮುದಾಯದ 13 ಮಂದಿಗೆ ಅವಕಾಶ ಕಲ್ಪಿಸಿದ್ದು, ಬಿಜೆಪಿ ದಲಿತ ಸಮುದಾಯದ ಪರ ಇದೆ ಎನ್ನುವುದಕ್ಕೆ ಸಾಕ್ಷಿ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಅರವಿಂದ ಲಿಂಬಾವಳಿ ಹೇಳಿದ್ದಾರೆ.

Advertisement

ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದ ಹಿತರಕ್ಷಣೆಗೆ ಅಗತ್ಯವಾದ ವಿಷಯಗಳನ್ನು ಪ್ರಣಾಳಿಕೆಯಲ್ಲಿ ಸೇರಿಸುವ ಕುರಿತು ಮತ್ತು ಚುನಾವಣಾ ಕಾರ್ಯತಂಡವನ್ನು ಸಜ್ಜುಗೊಳಿಸುವ ಸಲುವಾಗಿ ಚರ್ಚಿಸಲು ಬುಧವಾರ ಹೋಟೆಲ್‌ ಲಲಿತ್‌ ಅಶೋಕ್‌ನಲ್ಲಿ ಕರೆಯಲಾಗಿದ್ದ ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು, ಮಾಜಿ ಮತ್ತು ಹಾಲಿ ಶಾಸಕರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕಾದರೆ ದಲಿತ ಸಮುದಾಯದ ಮತಗಳು ಹೆಚ್ಚಿನ ಸಂಖ್ಯೆಯಲ್ಲಿ ಬೀಳಬೇಕು ಎಂದು ತಿಳಿಸಿದರು. 

 ಪ್ರಸ್ತುತ ದಲಿತ ಸಮುದಾಯದ ಸಾಕಷ್ಟು ಜನ ನಮ್ಮೊಂದಿಗಿದ್ದಾರೆ. ಆದರೂ ಬಿಜೆಪಿ ದಲಿತ ವಿರೋಧಿ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ. ಮುಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ದಲಿತ ಸಮು ದಾಯಕ್ಕೆ
ನಿರ್ದಿಷ್ಟ ಕಾರ್ಯಕ್ರಮ ರೂಪಿಸು ಪ್ರಣಾಳಿಕೆಯಲ್ಲಿ ಪ್ರಕಟಿಸುವ ಉದ್ದೇಶದಿಂದ ಈ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದರು. 

ಬಿಜೆಪಿ ಸಭೆಯಲ್ಲಿ ಖರ್ಗೆ ಬಗ್ಗೆ  ಪ್ರಶಂಸೆ 
ಬೆಂಗಳೂರು: ಕಾಂಗ್ರೆಸ್‌ನಲ್ಲಿ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿಸಿದ ಕುರಿತ ಚರ್ಚೆ ವೇಳೆ ಲೋಕಸಭೆಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಶಂಸಿ ಸಿದ ಪ್ರಸಂಗ  ಜೆಪಿ ಸಭೆಯಲ್ಲಿ ನಡೆಯಿತು.
 
ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಸಭೆಯಲ್ಲಿ, ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಸಿಕ್ಕಿಲ್ಲ ಎಂಬ ವಿಚಾರ ಪ್ರಸ್ತಾಪಿಸಿದ ನಿವೃತ್ತ ಐಎಎಸ್‌ ಅಧಿಕಾರಿ ಕೆ.ಶಿವರಾಮ್‌, ಮಲ್ಲಿಕಾರ್ಜುನ ಖರ್ಗೆ ರೀತಿಯ ನಾಯ  ಕರು ಮತ್ತೆ ಬಾರರು. ಆದರೆ, ಅವರಿಗೆ ಕಾಂಗ್ರೆಸ್‌ ಸಿಎಂ ಸ್ಥಾನ ಕೊಡಲೇ ಇಲ್ಲ. ನೆನ್ನೆ ಮೊನ್ನೆ ಬಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ದಲಿತ ಸಮುದಾಯಕ್ಕೆ ಸೇರಿದ ಖರ್ಗೆ ಸೇರಿದಂತೆ ಡಾ.ಜಿ.ಪರಮೇಶ್ವರ್‌, ಕೆ.ಎಚ್‌.ಮುನಿಯಪ್ಪ ಅವರಿಗೂ ಸಿಎಂ ಆಗಲು ಅವಕಾಶ ಕೊಟ್ಟಿಲ್ಲ ಎಂದರು. ಇದಕ್ಕೆ ಸಭೆಯಲ್ಲಿದ್ದವರು ಸಹಮತ ವ್ಯಕ್ತಪಡಿಸಿದರು. ಮಲ್ಲಿಕಾರ್ಜುನ ಖರ್ಗೆ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next