ಕೊಳ್ಳೇಗಾಲ: ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿ ಮಾಡುವುದೇ ಬಿಜೆಪಿ ಸರ್ಕಾರದ ಉದ್ದೇಶವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು. ಪಟ್ಟಣದ ಭ್ರಮರಾಂಭ ಕಲ್ಯಾಣ ಮಂಟಪದಲ್ಲಿ ಬಿಜೆಪಿ ವತಿಯಿಂದ ನಡೆದ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹೆಚ್ಚು ಬಡ ವರ್ಗದವರೆ ಇದ್ದು, ಜಿಲ್ಲೆಯ ಅಭಿ ವೃದ್ಧಿಗೆ ತನು, ಮನ, ಧನವನ್ನು ಅರ್ಪಿಸಲು ಸಿದ್ಧನಿದ್ದೇನೆ ಹಾಗೂ ಜಿಲ್ಲೆಯನ್ನು ಮಾದರಿ ಜಿಲ್ಲೆ ಯನ್ನಾಗಿ ಮಾಡುತ್ತೇನೆ ಕಾರಣ ಮಲೆ ಮಹದೇಶ್ವರ ನನ್ನ ಮನೆಯ ಮನೆ ದೇವರು ಎಂದರು.
ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ನಮ್ಮದೇ ಸರ್ಕಾರ ಆಳ್ವಿಕೆ ಮಾಡುತ್ತಿದೆ. ಆ ಕಾರಣ ನಮ್ಮ ಸರ್ಕಾರ ಡಬಲ್ ಎಂಜಿನ್ ಸರ್ಕಾರ. ಈ ಡಬಲ್ ಎಂಜಿನ್ ಸರ್ಕಾರ ಜನರಿಗೆ ಮಾಡುತ್ತಿರುವ ಯೋಜನೆ ಹಾಗೂ ಜಾರಿಗೆ ತಂದಿರುವ ಯೋಜನೆ ಬಹಳ ಅಚ್ಚುಕಟ್ಟಾಗಿ ಇದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದೆ. ಮುಖ್ಯಮಂತ್ರಿಗಳು ಒಂದು ಪಕ್ಷದ ಮುಖ್ಯಮಂತ್ರಿಯಲ್ಲ ಅವರು ಈ ರಾಜ್ಯದ ಎಲ್ಲಾ ಪಕ್ಷಗಳಿಗೆ ಮತ್ತು ಸಾರ್ವಜನಿಕರಿಗೆ ಮುಖ್ಯಮಂತ್ರಿಗಳು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತ ದೇಶಕ್ಕೆ ಮಾದರಿಯಾಗಿದೆ ಎಂದರು.
ಮತ್ತೆ ಬಿಜೆಪಿ ಅಧಿಕಾರಕ್ಕೆ: ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ಧ ಹಾಗೇ ಚಾಮರಾಜನಗರ ಲೋಕಸಭಾ ವ್ಯಾಪ್ತಿಗೆ ಬರುವ ಹನೂರು, ಕೊಳ್ಳೇಗಾಲ, ಚಾಮರಾಜನಗರ, ಗುಂಡ್ಲುಪೇಟೆ, ವರುಣ, ತಿ.ನರಸೀಪುರ, ಎಚ್.ಡಿ.ಕೋಟೆ, ನಂಜನಗೂಡು ಈ 8 ತಾಲೂಕಿನಲ್ಲೂ ಸಹ ಬಿಜೆಪಿ ಅಧಿಕಾರಕ್ಕೆ ಬರಬೇಕು. ಅಧಿಕಾರಕ್ಕೆ ಬರಬೇಕಾದರೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿ ಮನೆಮನೆಗೆ ತೆರಳಿ ಬಿಜೆಪಿ ಸಾಧನೆ ಮತ್ತು ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಪಕ್ಷದ ಬಲವರ್ಧನೆಗೆ ಶ್ರಮಿಸಿ: ಜೊತೆಗೆ ಪಕ್ಷದ ಮುಖಂಡರು ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು ಹಾಗೂ ಪ್ರಮಾಣಿಕವಾಗಿ ಇರಬೇಕು. ಬಿಜೆಪಿಯಲ್ಲಿ ಪಕ್ಷ ಕಟ್ಟಿದವರಿಗೆ ಮಾತ್ರ ಬೆಲೆ ಇರು ತ್ತದೆ. ಇಲ್ಲವಾದರೆ ಬೆಲೆ ಇರುವುದಿಲ್ಲ ಹಾಗೂ ಈ ಪಕ್ಷದಲ್ಲಿ ದುಡಿಯುವ ಎತ್ತಿಗೆ ಮಾತ್ರ ಮರ್ಯಾದೆ ಇಲ್ಲವಾದರೆ ಒಂದು ಕಾಸಿಗೂ ಸಹ ಪ್ರಯೋಜನವಿಲ್ಲ ಎಂದರು.
ಶಾಸಕ ಎನ್.ಮಹೇಶ್, ರಾಜ್ಯ ಎಸ್ಸಿ ಮೋರ್ಚಾದ ಉಪಾಧ್ಯಕ್ಷ ಜಿ.ಎ ನ್. ನಂಜುಂಡಸ್ವಾಮಿ, ರಾಷ್ಟ್ರೀಯ ಒಬಿಸಿ ವರ್ಗಗಳ ಸದಸ್ಯ ನೂರೊಂದು ಶೆಟ್ಟಿ, ಬಿಜೆಪಿ ಜಿಲ್ಲಾ ಧ್ಯಕ್ಷ ಸುಂದರ್, ಮಾಜಿ ಶಾಸಕಿ ಪರಿಮಳ ನಾಗಪ್ಪ, ಬಿಜೆಪಿ ಮಾಜಿ ಅಧ್ಯಕ್ಷ ಪ್ರೊ.ಮಲ್ಲಿಕಾರ್ಜುನಪ್ಪ, ಕೇಂದ್ರ ಬರ ಪರಿಹಾರ ಸಮಿತಿ ಅಧ್ಯಕ್ಷ ರಾಮ ಚಂದ್ರ ಇತರರು ಇದ್ದರು.