Advertisement

ಕಂಬಳ ಕರಡು ಬೈಲಾ, ಮಾರ್ಗಸೂಚಿ: ಸಚಿವ ಸುನಿಲ್‌ಗೆ ಭಂಡಾರಿ ಮನವಿ

01:56 AM May 26, 2022 | Team Udayavani |

ಮಂಗಳೂರು: ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್‌ ಹೆಸರಿನಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಣಿ ಮಾಡುವುದು ಹಾಗೂ ಅಸೋಸಿಯೇಶನ್‌ನಲ್ಲಿ ವಿವಿಧ ಕಂಬಳ ಸಮಿತಿಗಳನ್ನು ಸಂಯೋಜಿಸಿ ಕೊಳ್ಳುವ ಕುರಿತಾಗಿ ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಅವರು ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ ಕುಮಾರ್‌ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

Advertisement

ಮಾ. 23ರಂದು ನಡೆದ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ “330ನೇ ನಿಯಮದ’ ಅಡಿಯಲ್ಲಿ ಕಂಬಳದ ಅಸ್ತಿತ್ವವನ್ನು ಉಳಿಸಿಕೊಳ್ಳಲು ರಾಜ್ಯ ಸರಕಾರದಿಂದ ಪ್ರೋತ್ಸಾಹ ಮತ್ತು ಪ್ರೋತ್ಸಾಹ ಧನ ನೀಡುವ ಬಗ್ಗೆ ಪ್ರಸ್ತಾವಿಸಿ ನಾನು ಮಾತನಾಡಿದ್ದೆ. ನನ್ನ ಧ್ವನಿಗೆ ದ.ಕ. ಜಿಲ್ಲೆಯ ಎಲ್ಲ ಶಾಸಕರು ಹಾಗೂ ಇತರ ಶಾಸಕರು ಕೂಡ ಪಕ್ಷ ಭೇದ ಮರೆತು ಬೆಂಬಲಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕ್ರೀಡಾ ಸಚಿವರು, ಕರ್ನಾಟಕ ವಿಧಾನ ಪರಿ ಷತ್ತಿನ ಸಭಾಪತಿಗಳ ನೇತೃತ್ವ ದಲ್ಲಿ ಸಂಬಂಧಪಟ್ಟ ಶಾಸಕರು, ಅಧಿಕಾರಿಗಳು ಒಂದು ಸಭೆ ಯನ್ನು ಕರೆದು ಚರ್ಚಿಸುತ್ತೇನೆ ಎಂಬ ಆಶ್ವಾಸನೆಯನ್ನು ಸದನದಲ್ಲಿ ನೀಡಿದ್ದರು. ಕ್ರೀಡಾ ಸಚಿವರ ಆಶ್ವಾಸನೆ ಯಂತೆ ಎ. 19 ರಂದು ವಿಧಾನ ಪರಿಷತ್ತಿನ ಸಭಾಪತಿಗಳ ಅಧ್ಯಕ್ಷತೆಯಲ್ಲಿ ಸಭೆಯನ್ನು ಕರೆದು ಅಧಿಕಾರಿ ಗಳೊಂದಿಗೆ ಮತ್ತು ಶಾಸಕರೊಂದಿಗೆ ಚರ್ಚಿಸಿದ್ದಾರೆ.

ನಡವಳಿಯಲ್ಲಿ ಸೂಚಿಸಿರುವಂತೆ, “ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್‌’ ಹಾಗೂ ಅದಕ್ಕೆ ಬೇಕಾದ ಕರಡು ಬೈಲಾ ಸಿದ್ಧಪಡಿಸಿ ಸರಕಾರದ ಅನುಮೋದನೆ ಪಡೆಯಬೇಕಾಗುತ್ತದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ, ತಮ್ಮ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿಯ ಎಲ್ಲ ಶಾಸಕರು, ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಹಾಗೂ ಕಂಬಳಕ್ಕೆ ಸಂಬಂಧಪಟ್ಟವರ ಸಭೆ ಕರೆದು ಇದರ ಬಗ್ಗೆ ಚರ್ಚಿಸಿ ಕರಡು ಬೈಲಾ ಮತ್ತು ಮಾರ್ಗಸೂಚಿ ಸಿದ್ಧಪಡಿಸಲು ಅನುವು ಮಾಡಿಕೊಡ ಬೇಕೆಂದು’ ಪತ್ರದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next