Advertisement
ನಗರದಲ್ಲಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಸೋಮವಾರ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆಗಾಗಿ ಗೆಲುವಿನತ್ತ ನಮ್ಮ ಪಯಣ ಅಭ್ಯಾಸ ಪುಸ್ತಕ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
Related Articles
Advertisement
ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಮಾತನಾಡಿ, ರಾಜ್ಯದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಏಕೈಕ ರಾಜಕಾರಣಿ ಸತೀಶ. ಅವರ ಕಾರ್ಯಕ್ರಮಗಳು ಅರ್ಥಪೂರ್ಣವಾಗಿರುತ್ತವೆ. ಅವರ ನಡೆಯಲ್ಲಿ ನಾವು ಸಾಗೋಣ. ಅವರ ಜೀವನ ಸರಳತೆಯಿಂದ ಹಾಗೂ ವಿಚಾರಗಳು ಎತ್ತರದ ಸ್ಥಾನದಲ್ಲಿ ಇರುತ್ತವೆ. ಅವರ ದೂರದೃಷ್ಟಿ, ಮುಂದಾಲೋಚನೆಯಲ್ಲಿ ಸಮಾಜದ ಕಳಕಳಿ ಎದ್ದುಕಾಣುತ್ತದೆ ಎಂದರು.
ಶಾಸಕರಾದ ಪ್ರಸಾದ ಅಬ್ಬಯ್ಯ, ಗಣೇಶ ಹುಕ್ಕೇರಿ, ಟಿ. ರಘುಮೂರ್ತಿ, ಡಾ| ಅಂಜಲಿ ನಿಂಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಾಜಿ ಶಾಸಕರಾದ ಅಶೋಕ ಪಟ್ಟಣ, ಎಸ್.ಬಿ. ಘಾಟಗೆ, ರಮೇಶ ಕುಡಚಿ, ಕಾಕಾಸಾಹೇಬ ಪಾಟೀಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಮಾಜಿ ಸಚಿವ ವೀರಕುಮಾರ ಪಾಟೀಲ, ಬೆಳಗಾವಿ ಡಿಡಿಪಿಐ ಬಸವರಾಜ ನಾಲವತವಾಡ, ಚಿಕ್ಕೋಡಿ ಡಿಡಿಪಿಐ ಮೋಹನ ಹಂಚಾಟೆ, ಯುವ ನಾಯಕ ರಾಹುಲ್ ಜಾರಕಿಹೊಳಿ, ಯುವ ನಾಯಕಿ ಪ್ರಿಯಾಂಕ ಜಾರಕಿಹೊಳಿ, ಗಜಾನನ ಮಂಗಸೂಳಿ, ಬಿ. ಸೋಮಶೇಖರ್, ಅಶೋಕ ಪೂಜಾರಿ, ಇಸ್ಮಾಯಿಲ್ ತಮಟಗಾರ, ಮಹಾವೀರ ಮೋಹಿತೆ, ಬಾಬಾಸಾಹೇಬ ಪಾಟೀಲ, ವಿಶ್ವಾಸ ವೈದ್ಯ, ಬಸವರಾಜ ಕೌಜಲಗಿ ಇತರರು ಇದ್ದರು. ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಸ್ವಾಗತಿಸಿದರು.
ಕೆಲವು ರಾಜಕಾರಣಿಗಳು ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ವಿದೇಶಕ್ಕೆ ಕಳುಹಿಸುತ್ತಾರೆ. ಆದರೆ ನನ್ನ ಮಕ್ಕಳಾದ ರಾಹುಲ್ ಮತ್ತು ಪ್ರಿಯಾಂಕ ಅವರಿಗೆ ಸ್ಥಳೀಯವಾಗಿ ಶಿಕ್ಷಣ ನೀಡಿ, ಸಾಮಾಜಿಕ ಕೆಲಸದಲ್ಲಿ ತೊಡಗಲು ಸಲಹೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಮಾಜ ಸೇವೆಯಲ್ಲಿ ತೊಡಗಿಕೊಳ್ಳಲಿದ್ದಾರೆ.ಸತೀಶ ಜಾರಕಿಹೊಳಿ,
ಕೆಪಿಸಿಸಿ ಕಾರ್ಯಾಧ್ಯಕ್ಷರು, ಶಾಸಕರು ಬುದ್ಧ, ಬಸವ, ಅಂಬೇಡ್ಕರ್ ದಾರಿಯಲ್ಲಿ ಸಾಗುತ್ತಿರುವ ಸತೀಶ ಜಾರಕಿಹೊಳಿ ನಡೆಯಲ್ಲಿ ನಾವು ಸಾಗೋಣ. ಕೇವಲ ರಾಜಕೀಯ ಮಾಡುವುದು ಅಲ್ಲ. ರಾಜಕೀಯದ ಜತೆ ಸಾಮಾಜಿಕ ಕಾರ್ಯದಲ್ಲಿ ತೊಡಗಲು ನಾವು ಸತೀಶ ಅವರನ್ನು ಅನುಸರಿಸೋಣ. ಇವರ ಸಾಮಾಜಿಕ ಸೇವೆ ರಾಜ್ಯದಲ್ಲಿಯೇ ಮಾದರಿಯಾಗಿದೆ.
ಎಂ.ಬಿ. ಪಾಟೀಲ, ಮಾಜಿ ಸಚಿವರು