Advertisement

ಸತೀಶ್‌ ಜಾರಕಿಹೊಳಿ ವಿರುದ್ಧ ಬ್ರಾಹ್ಮಣ ಮಹಾಸಭಾ ದೂರು

06:26 PM Apr 20, 2019 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆ ವೇಳೆ ಬೆಳಗಾವಿಯಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

Advertisement

ಈ ಸಂಬಂಧ ಶುಕ್ರವಾರ ಮಹಾಸಭಾದ ಉಪಾಧ್ಯಕ್ಷ ಶಂಕರನಾರಾಯಣ ಮತ್ತು ಪ್ರಧಾನ ಕಾರ್ಯದರ್ಶಿ ರಾಂ ಪ್ರಸಾದ್‌ ನೇತೃತ್ವದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರಿಗೆ ದೂರು ನೀಡಲಾಗಿದೆ. ಸೇನೆಯಲ್ಲಿ ದೇಶಪಾಂಡೆ, ಕುಲಕರ್ಣಿ, ಜೋಷಿ ಸೇರಿ ಬ್ರಾಹ್ಮಣರು ಜೀವ ಬಿಟ್ಟ ಇತಿಹಾಸವಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವುದು

ಮತ್ತು ಒಂದು ಸಮಾಜದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವುದು ಚುನಾವಣಾ ಆಯೋಗ ವಿಧಿಸಿರುವ ನಿಯಮಗಳ ಸ್ಪಷ್ಟ ಉಲ್ಲಂಘನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಯಾವುದೇ ಜಾತಿಯ ವಿರುದ್ಧ ಜನಪ್ರತಿನಿಧಿಗಳು ಮಾತನಾಡುವುದನ್ನು ಮಹಾಸಭಾ ಖಂಡಿಸುತ್ತದೆ. ಇಂತಹ ಹೇಳಿಕೆ ನೀಡಿರುವ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಂಕರ್‌ ನಾರಾಯಣ, ಸಚಿವ ಸತೀಶ್‌ ಜಾರಕಿಹೊಳಿ ಆಡಿರುವ ಮಾತುಗಳಿಂದ ಸಮುದಾಯಕ್ಕೆ ತೀವ್ರ ನೋವಾಗಿದೆ. ಸಚಿವರ ಹೇಳಿಕೆ ಸತ್ಯಕ್ಕೆ ದೂರ. ಬ್ರಾಹ್ಮಣ ಸಮುದಾಯದವರು ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯರಾಗಿದ್ದ ಸಾಕಷ್ಟು ಉದಾಹರಣೆಗಳಿವೆ. ಅದೇ ರೀತಿ ಸೇನೆಯಲ್ಲೂ ಕಾರ್ಯನಿರ್ವಹಿಸುತ್ತಿದ್ದಾರೆ, ಇದನ್ನು ಸಚಿವರು ಅರಿಯಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next