Advertisement
ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಬೆಂಗಳೂರಿಗೆ ಬ್ರ್ಯಾಂಡ್ ಎಲ್ಲಿತ್ತು ? ಬ್ರ್ಯಾಂಡ್ ಬೆಂಗಳೂರು ಬಂದಿದ್ದು ದೇವೇಗೌಡರ ಕಾಲದಲ್ಲಿ. ಅವರು ಬಂದು ಬ್ರ್ಯಾಂಡ್ ಬೆಂಗಳೂರಿನ ಹೆಸರನ್ನು ಹೈಜಾಕ್ ಮಾಡಿದ್ದರು. ಬರೀ ಸೂಟು ಬೂಟು ಹಾಕಿಕೊಂಡರೆ ಬ್ರಾಂಡ್ ಬೆಂಗಳೂರು ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
Related Articles
Advertisement
ಬೆಂಗಳೂರು ಮಹಾನಗರದಲ್ಲಿ ಸಪ್ತ ಸಚಿವರಂತೆ ಏಳು ಸಚಿವರು ಇದ್ದಾರೆ. ಇಷ್ಟು ಜನ ಇಟ್ಟುಕೊಂಡು ನಗರದ ಜನತೆಗೆ ಏನು ಸಂದೇಶ ಕೊಡುತ್ತಿದ್ದಾರೆ. ಯಾವ ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು ಅನುದಾನ ತೆಗೆದುಕೊಂಡು ಹೋದರು. ಆ ಹಣವನ್ನು ಯಾರಿಗೆ ಕೊಟ್ಟಿದ್ದಾರೆ..?ಬರೀ ಫೋಟೋ ತೆಗೆಸಿಕೊಳ್ಳುವುದಕ್ಕೆ ನಗರ ಪ್ರದಕ್ಷಿಣೆ ಮಾಡಬೇಡಿ ಎಂದು ಸಿಎಂ ವಿರುದ್ಧ ಕಿಡಿ ಕಾರಿದರು. ಕಂದಾಯ ಸಚಿವರ ಕ್ಷೇತ್ರದಲ್ಲಿ ಎಷ್ಟು ಕೆರೆ ನುಂಗಿ ಹಾಕಿದ್ದಾರೆ? ಪುಟ್ಟೇನಹಳ್ಳಿ ಕೆರೆ ನಾಶಗೊಳಿಸಿ ಜೆಪಿ ನಗರ ಡಾಲರ್ಸ್ ಕಾಲೋನಿ ಅಂತ ಮಾಡಿಕೊಂಡರು. ಈ ಹಿಂದೆ ನಾನು ೧೪ ತಿಂಗಳು ಸಿಎಂ ಆಗಿದ್ದಾಗ ಇದನ್ನು ಸ್ವಚ್ಛ ಮಾಡುವ ಶಕ್ತಿ ಇರಲಿಲ್ಲ. ಯಾಕೆಂದರೆ ಆಗ ನನಗೆ ಅದರ ಸ್ವಾತಂತ್ರ್ಯವೇ ಇರಲಿಲ್ಲ. ಆಗ ನಗರಾಭಿವೃದ್ಧಿ ಸಚಿವರು, ಉಪ ಮುಖ್ಯಮಂತ್ರಿ ಆದವರು ಅವರೇ ಸಭೆ ಕರೆಯಬೇಕಿತ್ತು. ನಾನು ಮುಖ್ಯಮಂತ್ರಿಯಾದರೂ ಕೂಡ ಸುಮ್ಮನೆ ಇರಬೇಕಿತ್ತು. ಬೆಂಗಳೂರಿಗೆ ಸಂಬಂಧಿಸಿದಂತೆ ಸಭೆ ಕರೆಯೋ ಹಾಗಿರಲಿಲ್ಲ. ಆ ರೀತಿಯ ಸಂದರ್ಭ ಇತ್ತು. ಕಂದಾಯ ಸಚಿವರ ಕ್ಷೇತ್ರದಲ್ಲಿ ಎಷ್ಟು ಕೆರೆ ನುಂಗಿ ಹಾಕಿದ್ದಾರೆ? ಎಂದು ಆರ್. ಅಶೋಕ್ ವಿರುದ್ಧ ಕಿಡಿ ಕಾರಿದರು. ಅಧಿಕಾರಿಗಳನ್ನು ಬೈಯ್ದಿದ್ದಾರೆ, ಏನು ಪ್ರಯೋಜನ ? ರಾಯಚೂರಿನ ಬಿಜೆಪಿ ಎಂಎಲ್ಎಯೊಬ್ಬ ಅಧಿಕಾರಿಯ ಮೇಲೆ ಯಾವ್ಯಾವ ಪದಬಳಕೆ ಮಾಡಿದ್ದಾರೆ. ಚೀಫ್ ಇಂಜಿನಿಯರ್ ಗೆ ಎಂತಹ ಶಬ್ದ ಬಳಕೆ ಮಾಡಿದ್ದಾರೆ? ಶಾಸಕರು ಹೇಳಿದರೆ ಬಿಲ್ ಮಂಜೂರು ಮಾಡಬೇಕಾಗಿರುವುದಂತೆ. ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಇದೆ. ರಾಜ್ಯಸಭೆಗೆ ಬಿಜೆಪಿಯಿಂದ ಅರ್ಜಿ ಹಾಕಿದ ವ್ಯಕ್ತಿಯೊಬ್ಬರ ಮನೆಗೇ ನೀರು ನುಗ್ಗಿದೆ ಎಂದು ಕಿಡಿ ಕಾರಿದರು. ದೂರ ಉಳಿದವರ ಮನವೊಲಿಕೆ ಕಳೆದ ಮೂರು ವರ್ಷದಲ್ಲಿ ಪಕ್ಷದ ಒಂದಷ್ಟು ಜನ ದೂರ ಉಳಿದಿದ್ದಾರೆ. ಅವರ ಮನವೊಲಿಸಲು ಸಲಹೆ ಬಂದಿದೆ. ಇದಕ್ಕೆ ವೇದಿಕೆ ಸೃಷ್ಟಿಸುವ ಬಗ್ಗೆ ತೀರ್ಮಾನವಾಗಿದೆ. ಪಕ್ಷದ ಸಂಘಟನೆ ಕುರಿತೂ ಚರ್ಚೆಯಾಗಿದೆ. ಪರಿಷತ್ ಗೆ ಒಬ್ಬರನ್ನ ಆಯ್ಕೆ ಮಾಡಬೇಕು. ಅದರ ಸಂಪೂರ್ಣ ತೀರ್ಮಾನವನ್ನ ದೇವೇಗೌಡರಿಗೆ ಬಿಡಲಾಗಿದೆ. ರಾಜ್ಯಸಭೆಗೆ ನಾಲ್ಕನೇ ಅಭ್ಯರ್ಥಿಗೆ ಎರಡು ಪಕ್ಷಗಳಿಗೆ ಯಾವುದೇ ಸಂಖ್ಯಾಬಲ ಇಲ್ಲ.
ಹಾಗಾಗಿ ನಮ್ಮ ಪಕ್ಷಕ್ಕೆ ಒಂದು ಸ್ಥಾನ ಇದೆ. ಇದರ ಬಗ್ಗೆಯೂ ದೇವೇಗೌಡರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದರು.