Advertisement

ಲಂಚ ಕೊಟ್ಟವರಿಗೂ ಶಿಕ್ಷೆ

10:37 AM Aug 01, 2018 | Team Udayavani |

ಹೊಸದಿಲ್ಲಿ: ಬಹು ನಿರೀಕ್ಷಿತ ಭ್ರಷ್ಟಾಚಾರ ನಿಗ್ರಹ (ತಿದ್ದುಪಡಿ)ಕಾಯ್ದೆಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಸಹಿ ಹಾಕಿದ್ದು, ಇದೀಗ ಅಧಿಕೃತವಾಗಿ ಕಾನೂನಾಗಿ ಜಾರಿಯಾಗಿದೆ. ಹೊಸ ಕಾನೂನಿನ ಪ್ರಕಾರ ಇನ್ನು ಮುಂದೆ ಲಂಚ ಪಡೆದವರಷ್ಟೇ ಅಲ್ಲದೇ, ಲಂಚ ಕೊಟ್ಟವರಿಗೂ ಗರಿಷ್ಠ 7 ವರ್ಷಗಳವರೆಗೆ ಶಿಕ್ಷೆ ವಿಧಿಸಬಹುದಾಗಿದೆ. ಈ ಕಾಯ್ದೆಯ ವಿಶೇಷವೆಂದರೆ, ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ದೂರು ಬಂದ ತಕ್ಷಣ ಸಿಬಿಐ ಸೇರಿದಂತೆ ಯಾವುದೇ ಸಂಸ್ಥೆಗಳು ತನಿಖೆ ಕೈಗೆತ್ತಿಕೊಳ್ಳುವಂತಿಲ್ಲ. ಸಂಬಂಧಪಟ್ಟವರ ಒಪ್ಪಿಗೆ ಪಡೆದ ನಂತರ ತನಿಖೆ ನಡೆಸಬೇಕಾಗುತ್ತದೆ. ಅಷ್ಟರ ಮಟ್ಟಿಗೆ ಈ ಕಾಯ್ದೆಯಲ್ಲಿ ಸರಕಾರ ನಡೆಸುವವರಿಗೆ ಭದ್ರತೆ ಒದಗಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next