Advertisement

ಸೇತುವೆ ಕೆಳಗೆ ಉರುಳಿದ ಟ್ರಕ್‌: 30 ಮಂದಿ ಸಾವು

12:20 PM Mar 07, 2018 | Team Udayavani |

ಭಾವ್‌ನಗರ್‌: ಗುಜರಾತ್‌ನ ಭಾವ್‌ನಗರ್‌ ಜಿಲ್ಲೆಯಲ್ಲಿ ಟ್ರಕ್‌ವೊಂದು ಸೇತುವೆ ಕೆಳಗೆ ಉರುಳಿಬಿದ್ದ ಪರಿಣಾಮ, 30 ಮಂದಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ವಾಹನವೊಂದನ್ನು ಓವರ್‌ಟೇಕ್‌ ಮಾಡಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ ಸೇತುವೆಯ ಕೆಳಗೆ ಉರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರೆಲ್ಲರೂ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದರು. ಮೃತರ ಪೈಕಿ ನಾಲ್ವರು ಮಕ್ಕಳು ಮತ್ತು 8 ಮಂದಿ ಮಹಿಳೆಯರೂ ಸೇರಿದ್ದಾರೆ. ಘಟನೆ ಬಗ್ಗೆ ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ. ಗುಜರಾತ್‌ ಸಿಎಂ ವಿಜಯ್‌ ರೂಪಾಣಿ ಅವರೂ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next