Advertisement

Politics: ಮುರಿದುಬಿದ್ದ AIADMK-BJP ಮೈತ್ರಿ

08:49 PM Sep 25, 2023 | Team Udayavani |

ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿ ಜತೆಗಿನ ಬಾಂಧವ್ಯವನ್ನು ಕಡಿದುಕೊಳ್ಳುವುದಾಗಿ ಎಐಎಡಿಎಂಕೆ ಸೋಮವಾರ ಅಧಿಕೃತವಾಗಿ ಪ್ರಕಟಿಸಿದೆ. ಮುಂದಿನ ಚುನಾವಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಹೇಳಿಕೊಂಡಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಮುನ್ನವೇ ಈ ನಿರ್ಧಾರ ಹೊರಬಿದ್ದಿದೆ.

Advertisement

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಎಐಎಡಿಎಂಕೆಯ ನಾಯಕ ಕೆ. ಅಣ್ಣಾದುರೈ ವಿರುದ್ಧ ನೀಡಿದ್ದ ಹೇಳಿಕೆಯಿಂದ ಉಭಯ ಪಕ್ಷಗಳ ನಡುವಿನ ಮೈತ್ರಿ ಮುಕ್ತಾಯವಾಗಿದೆ. ಚೆನ್ನೈಯಲ್ಲಿ ನಡೆದ ಪಕ್ಷದ ಸಂಸದರು ಮತ್ತು ಶಾಸಕರ ಸಭೆಯಲ್ಲಿ ಮೈತ್ರಿ ಮುಂದುವರಿಸುವ ಬಗ್ಗೆ ಸಮಗ್ರವಾಗಿ ಚರ್ಚೆ ನಡೆದಿದೆ. ರಾಜ್ಯ ಬಿಜೆಪಿ ಘಟಕದ ನಾಯಕರು ಎಐಎಡಿಎಂಕೆಯ ಮಾಜಿ ನಾಯಕರು, ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ವಿರುದ್ಧ ಒಂದು ವರ್ಷದಿಂದ ನಿರಂತರವಾಗಿ ವಿನಾಕಾರಣ ಟೀಕೆ ಮಾಡುತ್ತಿದ್ದಾರೆ. ಹೀಗಾಗಿ ಸಭೆಯಲ್ಲಿ ಬಿಜೆಪಿ ಜತೆಗಿನ ಮೈತ್ರಿಯನ್ನು ಮುಕ್ತಾಯ ಮಾಡಬೇಕು ಎಂದು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು ಎಂದು ಸಭೆಯ ಬಳಿಕ ಮಾತನಾಡಿದ ಎಐಎಡಿಎಂಕೆಯ ಉಪಮಹಾಪ್ರಧಾನ ಕಾರ್ಯದರ್ಶಿ ಕೆ.ಪಿ. ಮುನುಸ್ವಾಮಿ ತಿಳಿಸಿದ್ದಾರೆ.

ಮೈತ್ರಿ ಕಡಿದುಕೊಳ್ಳುವ ನಿರ್ಧಾರದ ಬಗ್ಗೆ ಬಿಜೆಪಿ ನಾಯಕ ಕೆ. ಅಣ್ಣಾಮಲೈ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ತಮಿಳುನಾಡಿನಾದ್ಯಂತ ಯಾತ್ರೆ ಕೈಗೊಂಡಿರುವ ಅವರು ಈ ಸಂದರ್ಭದಲ್ಲಿ ಮಾತನಾಡಲಾರೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next