ನವದೆಹಲಿ: 2023-24ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಬಡ ಮಧ್ಯಮವರ್ಗದ ಹಿತಾಸಕ್ತಿಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆರ್‌ಎಸ್‌ಎಸ್ ಸಲಹೆ ನೀಡಿದೆ.
ಇತ್ತೀಚೆಗಷ್ಟೇ ಸಂಘದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಮಧ್ಯಮ ವರ್ಗದವರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದರು.
ಅಲ್ಲದೇ, ದೇಶದಲ್ಲಿ 20 ಕೋಟಿ ಜನರು ಬಡತನ ರೇಖೆಗಿಂತ ಕೆಳಗಿದ್ದು, 23 ಕೋಟಿ ಜನರು ದಿನಕ್ಕೆ ಕೇವಲ 375 ರೂ.ಗಳ ವೇತನ ಪಡೆದುಕೊಳ್ಳುತ್ತಿದ್ದಾರೆ.
ಅಂಥವರ ಬಗ್ಗೆ ಗಮನಹರಿಸಬೇಕು ಎಂದಿದ್ದರು. ಈ ಬೆನ್ನಲ್ಲೇ ಆರ್‌ಎಸ್‌ಎಸ್ ಸರ್ಕಾರಕ್ಕೆ ಸಲಹೆ ನೀಡಿದ್ದು, ಹಣದುಬ್ಬರ, ನಿರುದ್ಯೋಗ, ಅಸಮಾನತೆಗಳನ್ನು ಎದುರಿಸುವ ನೀತಿಗಳನ್ನು ರೂಪಿಸುವಂತೆ ಹಾಗೂ ಮಧ್ಯಮವರ್ಗದ ನಿರೀಕ್ಷೆಗಳಿಗೆ ಪೂರಕವಾಗಿ ಬಜೆಟ್ ಮಂಡಿಸುವಂತೆ ತಿಳಿಸಿದೆ ಎಂದು ಮೂಲಗಳು ಹೇಳಿವೆ.