Advertisement

ಕರ್ನಾಟಕ ಬಂದ್ ಇದ್ದರೂ ಬಸ್ ವ್ಯವಸ್ಥೆ ಎಂದಿನಂತೆ ಇರಲಿದೆ: ಡಿಸಿಎಂ ಸವದಿ

03:45 PM Sep 27, 2020 | keerthan |

ಬೆಂಗಳೂರು: ಕೆಲವು ಸಂಘಟನೆಗಳು ಸೋಮವಾರ ಬಂದ್ ಗೆ ಕರೆ ಕೊಟ್ಟಿದ್ದರೂ ಕೂಡಾ ಎಲ್ಲಾ ವಿಭಾಗದ ಸರಕಾರಿ ಬಸ್ ಗಳ ಓಡಾಟ ಎಂದಿನಂತೆ ಇರಲಿದೆ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

Advertisement

ಬಂದ್ ದಿನ ರಾಜ್ಯದ್ಯಂತ ಸಾರಿಗೆ ಸಂಚಾರ ವ್ಯವಸ್ಥೆ ಸುಗಮವಾಗಿ ಸಾಗುವಂತಾಗಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಎಂದಿನಂತೆ ಬಸ್ ಸಂಚಾರ ಮುಂದುವರೆಯಲಿದೆ. ಜನತೆಗೆ ಈ ಬಗ್ಗೆ ಯಾವುದೇ ಆತಂಕ ಬೇಡ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:ಭಾರಿ ಮಳೆಗೆ ಕುಸಿದು ಬಿತ್ತು ಹೊಸೂರು ಸೇತುವೆ : ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಬಂದ್ ಹಿನ್ನೆಲೆಯಲ್ಲಿ ಬಸ್ಸುಗಳಿಗೆ ಮತ್ತು ಇತರ ಸರ್ಕಾರಿ ಆಸ್ತಿಪಾಸ್ತಿಗಳಿಗೆ ಯಾವುದೇ ರೀತಿಯ ಧಕ್ಕೆ ಉಂಟಾಗದಂತೆ ಹೆಚ್ಚಿನ ಸುರಕ್ಷತಾ ವ್ಯವಸ್ಥೆಗಳನ್ನು ಒದಗಿಸಿಕೊಡಬೇಕೆಂದು ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಕೋರಲಾಗಿದೆ. ಬಸ್ಸುಗಳಿಗೆ, ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟು ಮಾಡಲು ಯಾರೇ ಯತ್ನಿಸಿದರೂ ಕೂಡ ಅವರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಹಿಂಜರಿಯುವುದಿಲ್ಲವೆಂದು ಅವರು ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next