ಬೆಂಗಳೂರು: “ಜೂನ್ ಅಂತ್ಯದೊಳಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಒಟ್ಟಾರೆ ಏಳು ಸಾವಿರ ಬಸ್‌ಗಳು ಸೇರ್ಪಡೆಗೊಳ್ಳಲಿವೆ,” ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಶಾಂತಿನಗರದಲ್ಲಿ ಕೆಎಸ್‌ಆರ್‌ಟಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದ ಅವರು, “ಒಟ್ಟಾರೆ ಏಳು ಸಾವಿರದಲ್ಲಿ 5,500 ಬಸ್‌ಗಳು ಕೆಎಸ್‌ಆರ್‌ಟಿಸಿ ಹಾಗೂ 1,550 ಬಿಎಂಟಿಸಿಗೆ ಬರಲಿವೆ. ಅಲ್ಲದೆ, ಮುಂದಿನ ವರ್ಷ ಮೂರು ಸಾವಿರ ಬಸ್‌ಗಳನ್ನು ಖರೀದಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಕೆಎಸ್‌ಆರ್‌ಟಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಕ್ಕಪ್ಪನವರ ಮಾತನಾಡಿ, ಕೆಎಸ್‌ಆರ್‌ಟಿಸಿಯಲ್ಲಿರುವ ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕಬೇಕು. ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಬಿಎಂಟಿಸಿ ಅಧ್ಯಕ್ಷ ಎಂ. ನಾಗರಾಜು (ಯಾದವ್), ಉಪಾಧ್ಯಕ್ಷ ಬಿ. ಗೋವಿಂದರಾಜು, ಕೆಎಸ್‌ಆರ್‌ಟಿಸಿ ಉಪಾಧ್ಯಕ್ಷ ಬಸವರಾಜ ಬುಳ್ಳಾ, ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್. ಉಮಾಶಂಕರ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಡಾ.ಏಕ್‌ರೂಪ್ ಕೌರ್ ಮತ್ತಿತರರು ಉಪಸ್ಥಿತರಿದ್ದರು.
ನೋಟು ರದ್ಧತಿ ಯಿಂದ ಸಾರಿಗೆ ಸಂಸ್ಥೆಗಳಿಗೆ 60 ಕೋಟಿ ರೂ. ನಷ್ಟವಾಗಿದೆ. ಇದ ಲ್ಲದೆ, ಮಹದಾಯಿ, ಕಾವೇರಿ ಮತ್ತಿತರ ಮುಷ್ಕರದ ಹಿನ್ನೆಲೆಯಲ್ಲಿ ಕರೆ ನೀಡಿದ್ದ ಬಂದ್ ನಿಂದಾಗಿ ಹತ್ತಾರು ಕೋಟಿ ರೂ. ನಷ್ಟವಾ ಗಿದೆ. ಜತೆಗೆ ನೌಕರರಿಗೆ ಶೇ. 12.5ರಷ್ಟು ವೇತನ ಹೆಚ್ಚಳ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಿದೆ.
-ರಾಮಲಿಂಗಾರೆಡ್ಡಿ, ಸಾರಿಗೆ ಸಚಿವ