Advertisement

ಕೈಗೆ ಬಲ ತುಂಬಿದ ಉಪ ಚುನಾವಣೆ

10:56 AM Jan 03, 2022 | Team Udayavani |

ಸೇಡಂ: ಗ್ರಾಮ ಪಂಚಾಯಿತಿ ಮತ್ತು ಪುರಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಬಿಜೆಪಿಗಿಂತಲೂ ಡಬಲ್‌ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೇಡಂ ವಿಧಾನಸಭೆ ವ್ಯಾಪ್ತಿಯಲ್ಲಿ 32 ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಇದರಲ್ಲಿ ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದ್ದು, ಇನ್ನುಳಿದ 31ರಲ್ಲಿ ಕಾಂಗ್ರೆಸ್‌ 20 ಸ್ಥಾನಗಳಲ್ಲಿ ಗೆದ್ದಿದೆ. ಒಂದು ಪಕ್ಷೇತರ ಅಭ್ಯರ್ಥಿ ಹಾಗೂ ಬಿಜೆಪಿ 10 ಸ್ಥಾನ ಗೆದ್ದಿದೆ ಎಂದರು.

ಅಲ್ಲದೇ 425 ಭಾರಿ ಅಂತರದಿಂದ ಪುರಸಭೆಯಲ್ಲೂ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಇದು ಮುಂದಿನ ವಿಧಾನಸಭೆ ಚುನಾವಣೆ ದಿಕ್ಸೂಚಿಯಾಗಿದೆ. ವಿಧಾನಸಭೆ ವ್ಯಾಪ್ತಿಯ ಕರ್ಚಖೇಡ್‌ ಗ್ರಾಪಂನ 13 ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆ 7 ಸ್ಥಾನ, ಗರಗಪಳ್ಳಿಯ 16ರ ಪೈಕಿ 12ರಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ. ಈ ಮೂಲಕ ಎರಡೂ ಗ್ರಾಮ ಪಂಚಾಯಿತಿಗಳಲ್ಲಿ ಬಹುಮತ ಸಾಧಿಸಿದೆ ಎಂದು ಹೇಳಿದರು.

ಅಭಿವೃದ್ಧಿ ಮರೆಮಾಚಿ ಭ್ರಷ್ಟಾಚಾರದಲ್ಲಿ ತೊಡಗಿರುವ ಬಿಜೆಪಿಗೆ ಜನತೆ ಸರಿಯಾದ ಉತ್ತರ ನೀಡಿದ್ದಾರೆ. ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ಸಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆಡಳಿತ ದುರುಪಯೋಗ ಮಾಡಿಕೊಂಡು ಜನರಿಗೆ ಮಂಕು ಬೂದಿ ಎರಚಲಾಗುತ್ತಿದೆ ಎಂದು ಆರೋಪಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ, ಎಪಿಎಂಸಿ ಅಧ್ಯಕ್ಷ ಹೇಮರೆಡ್ಡಿ ಪಾಟೀಲ, ಹಿರಿಯ ಮುಖಂಡ ವಿಶ್ವನಾಥ ಪಾಟೀಲ ಬೊಮ್ನಳ್ಳಿ, ಅಬ್ದುಲ್‌ ಗಫೂರ ಹಾಗೂ ಇತರರು ಇದ್ದರು.

Advertisement

15 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್‌ ಲಸಿಕೆ ನೀಡುವ ನಿಟ್ಟಿನಲ್ಲಿ ಸರ್ಕಾರ ಘೋಷಿಸಿದೆ. ಈ ವಯಸ್ಸಿನ ಮಿತಿಯೊಳಗೆ ಇರುವವರು ಲಸಿಕೆ ಪಡೆದುಕೊಳ್ಳಬೇಕು. ಶಾಲೆ-ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ನಿಟ್ಟಿನಲ್ಲಿ ಶಾಲೆ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಗಮನಹರಿಸಬೇಕು. ಜೊತೆಗೆ 60 ವರ್ಷ ಮೇಲ್ಪಟ್ಟವರು ಬೂಸ್ಟರ್‌ ಡೋಸ್‌ ಪಡೆಯಬೇಕು. ಮುಂದಿನ ದಿನಗಳಲ್ಲಿ ಕೋವಿಡ್‌ ದೊಡ್ಡ ಪ್ರಮಾಣದಲ್ಲಿ ಉಲ್ಬಣಿಸುವ ಮುನ್ಸೂಚನೆ ಇದ್ದು, ಬೆಡ್‌, ಆಕ್ಸಿಜನ್‌, ಔಷಧಗಳ ಶೇಖರಣೆ ಬಗ್ಗೆ ಜಿಲ್ಲಾಡಳಿತಕ್ಕೆ ಸಲಹೆ ನೀಡಿದ್ದೇನೆ. -ಡಾ| ಶರಣಪ್ರಕಾಶ ಪಾಟೀಲ, ಮಾಜಿ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next