Advertisement
ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿರುವುದರಿಂದ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಉಪ ಚುನಾವಣೆಗೆ ನಾವು ಸನ್ನದ್ಧವಾಗಿದ್ದು, ಕೇಂದ್ರ ಚುನಾವಣ ಆಯೋಗ ರಾಜ್ಯದ 15 ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿರುವುದು ಸ್ವಾಗತಾರ್ಹ. ಎಲ್ಲ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಸ್ಪರ್ಧೆ ಇದೆ. ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಇದೆ. ಹೀಗಾಗಿ ಕಾಂಗ್ರೆಸ್ ಎಲ್ಲ ಕ್ಷೇತ್ರಗಳಲ್ಲಿಯೂ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಹೇಳಿದರು. ಕಳೆದ ಒಂದೂವರೆ ವರ್ಷದಿಂದ ಬಿಜೆಪಿಯವರು ಮೈತ್ರಿ ಸರಕಾರವನ್ನು ಉರುಳಿಸಿ, ಈಗ ಬಹುಮತ ಇಲ್ಲದಿದ್ದರೂ ಸರಕಾರ ರಚನೆ ಮಾಡಿ¨ªಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಏನೇನು ಆಮಿಷ ಒಡ್ಡಿ ಸರಕಾರ ರಚನೆ ಮಾಡಿ¨ªಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಸೋಮವಾರ ಅನರ್ಹತೆಯ ಪ್ರಕರಣ ವಿಚಾರಣೆಗೆ ಬರಲಿದೆ. ಕಾಂಗ್ರೆಸ್ ಕೂಡ ಕೇವಿಯೆಟ್ ಹಾಕಿರುವುದರಿಂದ ಸ್ಪೀಕರ್ ತೀರ್ಮಾನ ಸರಿಯಾಗಿದೆ ಎಂದು ನಾವು ಕೋರ್ಟ್‌ಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತೇವೆ.
Related Articles
Advertisement
ಭ್ರಷ್ಟಾಚಾರ ಮಾಡಿ ರಾಜೀನಾಮೆ ಸಲ್ಲಿಸಿರುವ ಅನರ್ಹ ಶಾಸಕರಿಗೆ ತಕ್ಕ ಪಾಠ ಕಲಿಸಲು ಕಾನೂನು ಮತ್ತು ಜನತಾ ನ್ಯಾಯಾಲಯದಲ್ಲಿ ಸೋಲಾಗಬೇಕು. ಆಗ ಮಾತ್ರ ಈ ರೀತಿಯ ಪಕ್ಷಾಂತರಿಗಳಿಗೆ ಒಂದು ಪಾಠವಾಗುತ್ತದೆ ಎಂದು ಹೇಳಿದರು.
ಈಗಾಗಲೇ ಚುನಾವಣ ಆಯೋಗ ಅನರ್ಹರಿಗೆ ಈ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ ಇಲ್ಲ ಎಂದು ಹೇಳಿದೆ. ಇನ್ನು ರಾಜರಾಜೇಶ್ವರಿ ನಗರ ಮತ್ತು ಮಸ್ಕಿ ಕ್ಷೇತ್ರಗಳಲ್ಲಿ ಅನರ್ಹ ಶಾಸಕರ ಗೆಲುವನ್ನು ಪ್ರಶ್ನಿಸಿ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಆ ಕ್ಷೇತ್ರಗಳಿಗೆ ಯಾವಾಗ ಚುನಾವಣೆ ನಡೆಯುತ್ತದೆಯೋ ದೇವರೇ ಬಲ್ಲ. ಅವರನ್ನು ದೇವರೇ ಕಾಪಾಡಬೇಕು ಎಂದು ವ್ಯಂಗ್ಯವಾಡಿದರು.
ಈಗಾಗಲೇ ಪಕ್ಷದ ವತಿಯಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ನೀಡದಿರುವುದರಿಂದ ಸೆ.24 ರಂದು ಬೆಳಗಾವಿಯಲ್ಲಿ ಸಮಾವೇಶ ನಡೆಸಲು ತೀರ್ಮಾನಿಸಿದ್ದೇವೆ. ಬಿಜೆಪಿ ಸಂಸದರು ಪ್ರವಾಹ ಪರಿಹಾರಕ್ಕೆ ಕೇಂದ್ರದಿಂದ ಹಣ ಅಗತ್ಯವಿಲ್ಲ ಎಂದು ಹೇಳಿ¨ªಾರೆ. ಅವರ ಮಾತು ಕೇಳಿದರೆ ಕೇಂದ್ರ ಸರಕಾರ ದಿವಾಳಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ. ಇವೆಲ್ಲವನ್ನು ನಾವು ಜನರ ಮುಂದೆ ಇಡುತ್ತೇವೆ ಎಂದು ಹೇಳಿದರು. ಆದರೆ ಸೆ. 26 ರಂದು ನಡೆಯುವ ಸರ್ವ ಸದಸ್ಯರ ಸಭೆ ಮುಂದೂಡಲಾಗಿದೆ ಎಂದು ಹೇಳಿದರು.
ಪರಮೇಶ್ವರ್ ನಿರ್ಲಕ್ಷ್ಯ ಇಲ್ಲಇದೇ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ| ಜಿ.ಪರಮೇಶ್ವರ್ ಅವರನ್ನು ಪಕ್ಷ ನಿರ್ಲಕ್ಷ್ಯ ಮಾಡಿಲ್ಲ. ಶಾಸಕಾಂಗ ಸಭೆ ನಡೆಯುವ ಬಗ್ಗೆ ಅವರಿಗೆ ಮಾಹಿತಿ ನೀಡಲಾಗಿತ್ತು. ಆದರೆ ಅವರು ದಿಲ್ಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ತೆರಳಿದ್ದರಿಂದ ಶಾಸಕಾಂಗ ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಹೊಸಕೋಟೆಯಲ್ಲಿ ನಡೆದ ಸಮಾವೇಶಕ್ಕೂ ಪರಮೇಶ್ವರ್ ಅವರಿಗೆ ಆಹ್ವಾನ ನೀಡಲಾಗಿತ್ತು. ಅವರು ಪೂರ್ವ ನಿಗದಿತ ಕಾರ್ಯಕ್ರಮ ಇದ್ದ ಹಿನ್ನೆಲೆಯಲ್ಲಿ ಗೈರು ಹಾಜರಾಗಿದ್ದರು ಎಂದು ಸಮರ್ಥಿಸಿಕೊಂಡರು. ಆಯೋಗಕ್ಕೆ ದೂರು
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅನರ್ಹ ಶಾಸಕರ ಜತೆ ಅಡ್ವೋಕೇಟ್ ಜನರಲ್ ಅವರನ್ನು ಕರೆದುಕೊಂಡು ಸಭೆ ಮಾಡಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿಯಾದ ಮೇಲೆ ಅವರು ಅಡ್ವೊಕೇಟ್ ಜನರಲ್ ಅವರನ್ನು ಕರೆದುಕೊಂಡು ಅನರ್ಹರ ಜತೆಗೆ ಸಭೆ ಮಾಡಿರುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ದೂರಿದ್ದಾರೆ. ಅನರ್ಹ ಶಾಸಕರು ರಾಜೀನಾಮೆ ನೀಡಲು ಬಿಜೆಪಿಯ ಕೈವಾಡ ಇದೆ ಎನ್ನುವುದೇ ನಮ್ಮ ಪ್ರಮುಖ ಆರೋಪವಾಗಿತ್ತು. ಈಗ ನಮ್ಮ ವಾದಕ್ಕೆ ಬಲ ಬಂದಂತಾಗಿದೆ. ಯಡಿಯೂರಪ್ಪ ಅನರ್ಹರ ಜತೆ ಸಭೆ ಮಾಡಿರುವುದನ್ನೂ ನ್ಯಾಯಾಲಯದ ಮುಂದಿಡುತ್ತೇವೆ. ಅಲ್ಲದೇ ಚುನಾವಣ ಆಯೋಗಕ್ಕೂ ದೂರು ನೀಡುತ್ತೇವೆ ಎಂದು ಹೇಳಿದರು. ಇದರ ಜತೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಪಾಲ್ಗೊಂಡಿರುವ ಸಭೆಯನ್ನು ವಿಧಾನಸೌಧದಲ್ಲಿ ನಡೆಸಿರುವುದು ಕೂಡ ಕಾನೂನು ಬಾಹಿರವಾಗಿದ್ದು, ಈ ಬಗ್ಗೆಯೂ ಚುನಾವಣ ಆಯೋಗಕ್ಕೆ ದೂರು ನೀಡಲಾಗುವುದು. ಚುನಾವಣ ಆಯೋಗ ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.