ನವದೆಹಲಿ: ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದ ಬೆನ್ನಲ್ಲೇ ಕರ್ನಾಟಕದ 15 ಅನರ್ಹ ಶಾಸಕರ ಕ್ಷೇತ್ರಗಳಿಗೂ ಉಪಚುನಾವಣೆಯ ದಿನಾಂಕ ಘೋಷಿಸಿದೆ.
ಅಕ್ಟೋಬರ್ 21ರಂದು ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಅಕ್ಟೋಬರ್ 24ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ.
ನ್ಯಾಯಾಲಯದ ತಡೆಯಾಜ್ಞೆ ಹಿನ್ನೆಲೆಯಲ್ಲಿ ರಾಜ್ಯದ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಿಸಿಲ್ಲ. ಆರ್ ಆರ್ ನಗರ(ಮುನಿರತ್ನ ಕ್ಷೇತ್ರ
) ಮತ್ತು ಮಸ್ಕಿ(
ಪ್ರತಾಪ್ ಗೌಡ)ಕ್ಷೇತ್ರಗಳಲ್ಲಿ ಉಪಚುನಾವಣೆ ದಿನಾಂಕ ಘೋಷಿಸಿಲ್ಲ. ಇಂದಿನಿಂದಲೇ ಉಪ ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ತಿಳಿಸಿದೆ.
ಉಪ ಚುನಾವಣೆ ನಡೆಯಲಿರುವ ಕ್ಷೇತ್ರ:
1)ಗೋಕಾಕ್
2)ಅಥಣಿ
3)ಕಾಗವಾಡ
4)ಹಿರೆಕೆರೂರು
5)ಯಲ್ಲಾಪುರ
6)ಯಶವಂತಪುರ್
7)ವಿಜಯನಗರ
8)ಶಿವಾಜಿನಗರ
9)ಹೊಸಕೋಟೆ
10)ಹುಣಸೂರು
11)ಕೆಆರ್ ಪೇಟೆ
12)ಮಹಾಲಕ್ಷ್ಮಿ ಲೇಔಟ್
13)ಕೆಆರ್ ಪುರ
14)ರಾಣೇಬೆನ್ನೂರು
15)ಚಿಕ್ಕಬಳ್ಳಾಪುರ