ದಾವಣಗೆರೆ: ಸಚಿವ ಸಂಪುಟಕ್ಕೆ ಹೊಸದಾಗಿ ಯಾರನ್ನು ಸೇರಿಸಿಕೊಳ್ಳಬೇಕು ಎಂಬುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ತಿಳಿಸಿದ್ದಾರೆ.
ಶಿರಮಗೊಂಡನಹಳ್ಳಿಯಲ್ಲಿರುವ ಶಾಸಕ ಎಸ್.ಎ.ರವೀಂದ್ರನಾಥ್ ಮನೆಗೆ ಔಪಚಾರಿಕವಾಗಿ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪಕ್ಷದ ವರಿಷ್ಠರು ಯಾರಿಗೆ ಸಚಿವ ಸ್ಥಾನ ನೀಡುತ್ತಾರೋ ಅದಕ್ಕೆ ನಾನು ಬದ್ಧ ಎಂದರು.
ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಶಿಕ್ಷಣ, ವ್ಯಾಪಾರದ ಸಂಪರ್ಕ ಕೊಂಡಿ. ಇಂಥ ಪ್ರಮುಖ ಜಿಲ್ಲೆಗೊಂದು ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದೇವೆ. ಜಿಲ್ಲೆಯಲ್ಲಿ ರವೀಂದ್ರನಾಥ್ ಅವರಂತಹ ಹಿರಿಯರಿದ್ದಾರೆ. ಹೀಗಾಗಿ ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಲ್ಲ ಎಂದರು.
ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಯಾವುದೇ ದಿನಾಂಕ ನಿಗದಿಯಾಗಿಲ್ಲ. ಸಚಿವ ಸಂಪುಟಕ್ಕೆ ಹೊಸ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಮತ್ತೂಮ್ಮೆ ವರಿಷ್ಠರೊಂದಿಗೆ ಮಾತನಾಡುವುದಾಗಿ ಹೇಳಿರುವುದನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಯಾವುದಕ್ಕೂ ಕಾದು ನೋಡೋಣ ಎಂದರು.
ಬಂದ್‌ಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ರೈತರ ಹಿತದೃಷ್ಟಿಯಿಂದ ಎಪಿಎಂಸಿ, ಭೂ ಸುಧಾರಣಾ ತಿದ್ದುಪಡೆ ಕಾಯ್ದೆ ಜಾರಿ ಮಾಡಲಾಗಿದೆ. ಆದರೆ ಕಾಂಗ್ರೆಸ್‌ನವರಿಗೆ ಬೇರೆ ಅಸ್ತ್ರ ಇಲ್ಲ. ಇದನ್ನು ಬಳಸಿಕೊಂಡು ರೈತರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆಂದು ದೂರಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರನ್ನುಗಮನದಲ್ಲಿಟ್ಟುಕೊಂಡು ಎರಡೂ ಮಸೂದೆಗಳನ್ನು ಜಾರಿ ಮಾಡಿದೆ. ರೈತರಿಗೆಉತ್ತಮ ಬೆಲೆ ಸಿಕ್ಕರೆ ರೈತರಿಗೆ ಅನುಕೂಲ.ಇದರಿಂದ ರೈತರಿಗೆ ಅನುಕೂಲವಾಗಿದ್ದು ರೈತರು ಖುಷಿಯಾಗಿದ್ದಾರೆ.
ಅಧಿವೇಶನದಲ್ಲಿ ಅಧಿಕೃತವಾಗಿ ಬಿಲ್ ಮಂಡನೆಯಾಗಿ ಪಾಸಾಗಿದೆ. ಒತ್ತಾಯಪೂರ್ವಕವಾಗಿ ನಾವು ಬಿಲ್ ಪಾಸ್ ಮಾಡಿಲ್ಲ. ಆದರೆ ಕಾಂಗ್ರೆಸ್‌ನವರುವಿನಾಕಾರಣ ಟೀಕಿಸುವ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದರು.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ