Advertisement

High Court: ಅಲೋಕ್‌ ಕುಮಾರ್‌ ಮೇಲಿನ ಕೇಸ್‌ ರದ್ದು

11:31 AM Aug 07, 2024 | Team Udayavani |

ಬೆಂಗಳೂರು: ಮಹಿಳಾ ಪೊಲೀಸ್‌ ಸಿಬ್ಬಂದಿ ಮೂಲಕ ನನ್ನ ಮೇಲೆ ಹಲ್ಲೆ ನಡೆಸಲಾಗಿದೆ. ಇದಕ್ಕೆ ಕಾರಣ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ ಎಂದು ತರಬೇತಿ, ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್‌ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್‌ ಪ್ರಕರಣವೊಂದರ ವಿಚಾರಣೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ.

Advertisement

ಈ ವಿಚಾರವಾಗಿ ಮಮತಾ ಸಿಂಗ್‌ ಎಂಬುವರು ತಮ್ಮ ವಿರುದ್ಧ ಸಲ್ಲಿಸಿದ್ದ ಖಾಸಗಿ ದೂರನ್ನು ಆಧರಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದ ವಿಚಾರಣಾ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿ ಅಲೋಕ್‌ ಕುಮಾರ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆಲೋಕ್‌ ಕುಮಾರ್‌ ವಿರುದ್ಧ ನಗರದ 39ನೇ ಹೆಚ್ಚುವರಿ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ವಿಚಾರಣಾ ಪ್ರಕ್ರಿಯೆಯನ್ನು ವಜಾಗೊಳಿಸಿ ಆದೇಶಿಸಿತು.

ವಿಚಾರಣೆ ವೇಳೆ ಅಲೋಕ್‌ ಕುಮಾರ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ಕೆ. ನಾವದಗಿ, ವಿಚಾರಣಾ ನ್ಯಾಯಾಲಯವು ಸಕ್ಷಮ ಪ್ರಾಧಿಕಾರದಿಂದ ಅನುಮತಿ ಇಲ್ಲದೇ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿದೆ. ದಂಡ ಪ್ರಕ್ರಿಯಾ ಸಂಹಿತೆ- 1973ರ ಕಲಂ 195ರ ಅಡಿ ಇಂತಹ ಕ್ರಮಕ್ಕೆ ಅವಕಾಶವಿಲ್ಲ. ಅಲ್ಲದೇ ದೂರುದಾರೆ ಮಮತಾ ಸಿಂಗ್‌ ಈಗಾಗಲೇ ತೀರಿಕೊಂಡಿದ್ದಾರೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಅಲೋಕ್‌ ಕುಮಾರ್‌ ವಿರುದ್ಧದ ಪ್ರಕರಣ ರದ್ದುಗೊಳಿಸಿ ಆದೇಶಿಸಿತು.

ಪ್ರಕರಣವೇನು?: ನನ್ನ ಮಗಳಿಗೆ ಸಂಬಂಧಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾರೆ’ ಎಂದು ಆರೋಪಿಸಿ ಮಮತಾ ಸಿಂಗ್‌ ನೀಡಿದ್ದ ದೂರು ಆಧರಿಸಿ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು ಎಫ್ಐಆರ್‌ ದಾಖಲಿಸಿದ್ದರು. ಈ ದೂರು ಹಿಂಪಡೆಯುವಂತೆ ಸಂಬಂಧಿಕರ ಪರವಾಗಿ ಕ್ರಿಶ್ಚಿಯನ್‌ ಮಿಷನರಿಯಲ್ಲಿ ಕೆಲಸ ಮಾಡುವ ಸಿಸ್ಟರ್‌ ಶಾಲಿನಿ ಬೆದರಿಕೆ ಹಾಕಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ಅಂದಿನ, ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾಗಿದ್ದ ಅಲೋಕ್‌ ಕುಮಾರ್‌ ಅವರಿಗೆ ಮಮತಾ ಸಿಂಗ್‌ ದೂರು ನೀಡಿದ್ದರು. “ನಾನು ನೀಡಿದ ಈ ದೂರನ್ನು ಅಲೋಕ್‌ ಕುಮಾರ್‌ ಗಂಭೀರವಾಗಿ ಪರಿಗಣಿಸಿಲ್ಲ. ದೂರು ದಾಖಲಿಸಲು ಆದೇಶಿಸಿಲ್ಲ. ಬದಲಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಹಿಳಾ ಪೊಲೀಸ್‌ ಸಿಬ್ಬಂದಿಯಿಂದ ನನ್ನ ಮೇಲೆ ಹÇÉೆ ನಡೆಸಿದ್ದರು’ ಎಂದು ಆರೋಪಿಸಿ ಮಮತಾ ಸಿಂಗ್‌ ಖಾಸಗಿ ದೂರು ದಾಖಲಿಸಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ಸಂತ್ರಸ್ತ ಬಾಲಕಿಯ ತಾಯಿ ಈ ಮಮತಾ ಸಿಂಗ್‌ ಆಗಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next