Advertisement

ಎತ್ತಿನಹೊಳೆ ವಿರುದ್ಧದ ಅರ್ಜಿ ಹಸಿರು ನ್ಯಾಯಪೀಠದಲ್ಲಿ ವಜಾ

11:40 PM May 24, 2019 | mahesh |

ಮಂಗಳೂರು: ಎತ್ತಿನಹೊಳೆ ಯೋಜನೆಯ ವಿರುದ್ಧ ಪರಿಸರವಾದಿಗಳು ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಹಸಿರು ನ್ಯಾಯ ಪೀಠ (ಎನ್‌ಜಿಟಿ) ಶುಕ್ರವಾರ ವಜಾಗೊಳಿಸಿ ತೀರ್ಪು ನೀಡಿದೆ. ಈ ಮೂಲಕ ಎತ್ತಿನಹೊಳೆ ಯೋಜನೆಯ ವಿರುದ್ಧದ ಹೋರಾಟಕ್ಕೆ ಹಿನ್ನಡೆಯಾಗಿದೆ.

Advertisement

ಎತ್ತಿನಹೊಳೆ ಕಾಮಗಾರಿಗೆ ಸಂಬಂಧಿಸಿದಂತೆ ಅರಣ್ಯ ತೆರವಿಗೆ ಅವಕಾಶ ನೀಡಿರುವುದನ್ನು ಪ್ರಶ್ನಿಸಿ ಎನ್‌ಜಿಟಿ ಮುಂದೆ ಕೆ.ಎನ್‌. ಸೋಮಶೇಖರ್‌ ಮತ್ತು ಸಕಲೇಶಪುರದ ವಕೀಲ ಕಿಶೋರ್‌ ಕುಮಾರ್‌ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಇದರ ಅಂತಿಮ ತೀರ್ಪು ಪ್ರಕಟವಾಗಿದೆ.

ಕುಡಿಯುವ ನೀರಿನ ಯೋಜನೆಯಾಗಿರುವ ಹಿನ್ನೆಲೆಯಲ್ಲಿ ಇತರ ಆಕ್ಷೇಪ ಗಳು ಪರಿಗಣನೆಗೆ ಬರುವುದಿಲ್ಲವಾದ್ದರಿಂದ ಅರ್ಜಿ ಮತ್ತು ಮೇಲ್ಮನವಿ ಅರ್ಜಿ ಯನ್ನು ತಿರಸ್ಕರಿಸುವುದಾಗಿ ನ್ಯಾಯಪೀಠ ಆದೇಶ ಹೊರಡಿಸಿದೆ. ಆದರೂ ಪರಿಸರಕ್ಕೆ ಧಕ್ಕೆ ಆಗುವುದಾದಲ್ಲಿ ಸಂಬಂಧಪಟ್ಟ ಇಲಾಖೆಗಳು ಮಧ್ಯಪ್ರವೇಶ ಮಾಡಿ ಸೂಕ್ತ ತೀರ್ಮಾನ ಕೈಗೊಳ್ಳಬಹುದು. ಜತೆಗೆ ಪೂರಕ ಅಧ್ಯಯನ ನಡೆಸಲು ಅವಕಾಶವಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಉಲ್ಲೇಖೀಸಿದೆ.

“ಉದಯವಾಣಿ’ ಜತೆಗೆ ಮಾತನಾಡಿದ ಅರ್ಜಿದಾರ ಕೆ.ಎನ್‌. ಸೋಮಶೇಖರ್‌, ತೀರ್ಪಿನ ಪೂರ್ಣ ವಿವರವನ್ನು ವಕೀಲರ ಮೂಲಕ ಅಧ್ಯಯನ ಮಾಡಲಾಗುತ್ತಿದೆ. ಪೂರಕ ತೀರ್ಪು ಬಾರದ ಹಿನ್ನೆಲೆಯಲ್ಲಿ ಸುಪ್ರಿಂ ಕೋರ್ಟ್‌ನಲ್ಲಿ ಪ್ರಶ್ನಿಸಲು ನಿರ್ಧರಿಸಲಾಗಿದೆ. ಯೋಜನೆಯ ಮೂಲಕ ಪಶ್ಚಿಮ ಘಟ್ಟಕ್ಕೆ ಆಗುತ್ತಿರುವ ಹಾನಿ ಮತ್ತು ಯೋಜನೆಯ ನಿಗೂಢತೆಯ ವಿರುದ್ಧ ಹೋರಾಟ ನಿಲ್ಲುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next