Advertisement

ಚುನಾವಣೆ : ಸಾರ್ವತ್ರಿಕ ರಜೆ ಘೋಷಣೆ

02:43 AM Apr 18, 2019 | Sriram |

ಮಂಗಳೂರು: ಗುರುವಾರ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ನೆಗೋಶಿಯೆಬಲ್‌ ಇನ್ಸ್‌ಟ್ರಾಮೆಂಟ್‌ ಆಕ್ಟ್ 1881 ಪ್ರಕಾರ ವೇತನ ಸಹಿತ ರಜೆಯನ್ನು ಎಲ್ಲ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು, ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾಪ್ರತಿನಿಧಿಕಾಯ್ದೆ 1951 ಕಲಂ 135 ಬಿ ಅಡಿಯಲ್ಲಿ ನೀಡಲಾಗಿದೆ.

Advertisement

ಮತದಾರರು ಮತ ಚಲಾಯಿಸಲು ಎಲ್ಲಾ ರಾಜ್ಯ ಸರಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ.

ಆದಾಗ್ಯೂ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡತಕ್ಕದ್ದು ಎಂದು ಆದೇಶಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next