Advertisement
ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಮಹದಾಯಿ ಹೋರಾಟದ ವೇಳೆ ರೈತರ ಮೇಲೆ ದಾಖಲಿಸಿದ ಪ್ರಕರಣಗಳ ಕುರಿತು ಪ್ರಸ್ತಾಪಿಸಿದ ಕೋನರೆಡ್ಡಿ, ರೈತರ ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವುದಾಗಿ ಮುಖ್ಯಮಂತ್ರಿಗಳು
ಸದನದಲ್ಲಿ ಮತ್ತು ಸರ್ವಪಕ್ಷ ಸಭೆಯಲ್ಲಿ ಹೇಳಿದ್ದರು. ಆದರೆ, ಗೃಹ ಸಚಿವರು ಕೊಟ್ಟಿರುವ ಉತ್ತರದಲ್ಲಿ, ಹೋರಾಟಕ್ಕೆ ಸಂಬಂಧಿಸಿದಂತೆ 81 ಪ್ರಕರಣ ದಾಖಲಿಸಿದ್ದು, ಈ ಪೈಕಿ 51 ಪ್ರಕರಣ ಹಿಂಪಡೆಯುವ ಬಗ್ಗೆ ಸಂಪುಟ ಉಪಸಮಿತಿ ಮುಂದೆ ಪ್ರಸ್ತಾಪಿಸಲಾಗಿತ್ತು. ಆದರೆ, ಆ ಪೈಕಿ 29 ಪ್ರಕರಣಗಳಲ್ಲಿ 557 ಮಂದಿ ವಿರುದ್ಧ ದಾಖಲಾಗಿರುವ ಪ್ರಕರಣ ಹಿಂಪಡೆಯಲು ಸಂಪುಟ
ಉಪಸಮಿತಿ ತೀರ್ಮಾನಿಸಿದೆ. 22 ಪ್ರಕರಣಗಳು ಗಂಭೀರ ಅಪರಾಧಗಳಾಗಿರುವುದರಿಂದ ಅಭಿಯೋಜನೆಯಿಂದ ಹಿಂಪಡೆಯುವುದು
ಸೂಕ್ತವಲ್ಲ. ಉಳಿದ 30 ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಒಂದು
ಮಾತು ಹೇಳುತ್ತಾರೆ, ಗೃಹ ಸಚಿವರು ಅದಕ್ಕೆ ವ್ಯತಿರಿಕ್ತವಾಗಿ ಮಾತನಾಡುತ್ತಾರೆ. ಇವರ ಮಧ್ಯೆ ಹೊಂದಾಣಿಕೆಯಿಲ್ಲವೇ ಎಂದು ಪ್ರಶ್ನಿಸಿದರು.
ಮೇಲಿನ ಎಲ್ಲಾ ಪ್ರಕರಣ ಹಿಂಪಡೆಯುವ ಬಗ್ಗೆ ಮುಖ್ಯಮಂತ್ರಿಗಳು ಅಥವಾ ಗೃಹ ಸಚಿವರು ಸದನದಲ್ಲಿ ಇಂದೇ ಹೇಳಿಕೆ ನೀಡಬೇಕು. ಇಲ್ಲದಿದ್ದರೆ ತಾನು ಆಹೋರಾತ್ರಿ ಏಕಾಂಗಿ ಧರಣಿ ನಡೆಸುತ್ತೇನೆ. ಅದಕ್ಕಾಗಿ ಮುಖ್ಯಮಂತ್ರಿ ಅಥವಾ ಗೃಹ ಸಚಿವರನ್ನು ಸದನಕ್ಕೆ ಕರೆಸಿ ಎಂದು ಒತ್ತಾಯಿಸಿದರು. ಇದಕ್ಕೆ ಸರ್ಕಾರ ಸಮಯಾವಕಾಶ ಕೇಳಿತು. ಸೋಮವಾರದ ಕಲಾಪ ಇನ್ನೇನು ಮುಕ್ತಾಯದ ಹಂತ ತಲುಪಿತು ಎನ್ನುವಷ್ಟರಲ್ಲಿ ಮತ್ತೆ ವಿಷಯ ಪ್ರಸ್ತಾಪಿಸಿದ ಕೋನರೆಡ್ಡಿ, ರೈತರ ಮೇಲಿನ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯುವುದಾಗಿ ಸರ್ಕಾರ ಹೇಳುವವರೆಗೆ ತಾನು ಸದನದಿಂದ ಹೊರಹೋಗುವುದಿಲ್ಲ. ಏಕಾಂಗಿಯಾಗಿ ಆಹೋರಾತ್ರಿ ಧರಣಿ ನಡೆಸುತ್ತೇನೆ ಎಂದು ಹೇಳಿ ಸಭಾಧ್ಯಕ್ಷರ ಪೀಠದ ಎದುರು ಧಾವಿಸಿದರು. ಸದನದಲ್ಲಿದ್ದ ಇತರೆ ಜೆಡಿಎಸ್ ಸದಸ್ಯರೂ ಧರಣಿಗೆ ಕೈಜೋಡಿಸಿದರು. ಸರ್ಕಾರದ ಪರವಾಗಿ ಸಚಿವರಾದ ಟಿ.ಬಿ.ಜಯಚಂದ್ರ, ಕಾಗೋಡು ತಿಮ್ಮಪ್ಪ, ತನ್ವೀರ್ ಸೇs…, ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಬಿಜೆಪಿಯ ಕೆ.ಜಿ.ಬೋಪಯ್ಯ, ಜೆಡಿಎಸ್ ನ ಎಚ್.ಡಿ.ರೇವಣ್ಣ ಮತ್ತಿತರರು ಕೋನರೆಡ್ಡಿ ಮನವೊಲಿಸಲು ಪ್ರಯತ್ನಿಸಲಾಯಿತಾದರೂ ಪ್ರಯೋಜನವಾಗಲಿಲ್ಲ. ಕೊನೆಗೆ ಸಚಿವ ಜಯಚಂದ್ರ ಅವರು, ಈ ಕುರಿತು ಮಂಗಳವಾರ ಮುಖ್ಯಮಂತ್ರಿಗಳು ಉತ್ತರ ನೀಡುತ್ತಾರೆ. ಬುಧವಾರ ಸಚಿವ ಸಂಪುಟ ಸಭೆಯಲ್ಲಿ ರೈತರ ಮೇಲಿನ ಪ್ರಕರಣ ವಾಪಸ್ ಪಡೆಯುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.