Advertisement

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ಕುಂಡಿಕೆಯಲ್ಲಿ ಸ್ನಾನಕ್ಕಿರಲಿಲ್ಲ ಅವಕಾಶ

03:28 PM Oct 17, 2021 | Team Udayavani |

ಮಡಿಕೇರಿ: ನಾಡಿನ ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ತುಲಾಸಂಕ್ರಮಣದ ಭಾನುವಾರ  ಮಧ್ಯಾಹ್ನ1.11ಕ್ಕೆ ಪವಿತ್ರ ತೀರ್ಥೋದ್ಭವವಾಗಿದೆ.

Advertisement

ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದಲ್ಲಿ ಕಾವೇರಿ ಪವಿತ್ರ ತೀರ್ಥೋದ್ಭವಕ್ಕೆ ತೆರಳಲು ಕೋವಿಡ್‌ ನಿಯಮಗಳನ್ನು ಪಾಲಿಸಲು ಸೂಚಿಸಿ ಭಕ್ತರಿಗೆ ಅವಕಾಶ ನೀಡಲಾಗಿತ್ತು.

ತಲಕಾವೇರಿಯ ಕುಂಡಿಕೆಯಲ್ಲಿ ಸ್ನಾನ ಮಾಡಲು ಯಾರಿಗೂ ಅವಕಾಶ ನೀಡಲಾಗಿಲ್ಲ.ಸ್ವಯಂ ಸೇವಕರು ತೀರ್ಥ ವಿತರಿಸಿದರು.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮ ದತ್ತಿಗಳ ಇಲಾಖೆ, ಪೊಲೀಸ್‌ ಇಲಾಖೆ ಮತ್ತು ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದರು.

ರಜಾ ದಿನಗಳಿರುವುದರಿಂದ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿದ್ದ ಹಿನ್ನಲೆಯಲ್ಲಿ ಭಾಗಮಂಡಲದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಕಾಟಕೇರಿ ಬಳಿ ಏಕಮುಖ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಈ ಬಾರಿ ತಲಕಾವೇರಿಯಲ್ಲಿ ಸಂಜೆ 6 ಗಂಟೆಯ ನಂತರ ಪೂಜಾ ಕಾರ್ಯಗಳು ಇರುವುದಿಲ್ಲವೆಂದು ಆಡಳಿತ ಮಂಡಳಿ ತಿಳಿಸಿದೆ.
ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯ ನಿರ್ಮಾಣ ಮಾಡಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next