Advertisement

ಅದ್ದೂರಿ ಬಸವ ಜಯಂತಿ ಆಚರಣೆ: ಜಿಲ್ಲಾಧಿಕಾರಿ

05:29 PM Apr 27, 2022 | Shwetha M |

ಬಸವನಬಾಗೇವಾಡಿ: ರಾಜ್ಯಸರ್ಕಾರ ಈಗಾಗಲೇ ಶರಣರು ಜನ್ಮವೆತ್ತಿದ ಸ್ಥಳಗಳಲ್ಲಿ ಅದ್ಧೂರಿಯಾಗಿ ಜಯಂತ್ಯುತ್ಸವ ಆಚರಿಸಲು ನಿರ್ಧರಿಸಿದ್ದು ಅದೇ ರೀತಿ ಬಸವ ಜನ್ಮಸ್ಥಳವಾದ ಬಸವನಬಾಗೇವಾಡಿಯಲ್ಲಿ ಬಸವ ಜಯಂತಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹೇಳಿದರು.

Advertisement

ಮಂಗಳವಾರ ಸಂಜೆ ಪಟ್ಟಣದಲ್ಲಿ ಬಸವಜನ್ಮ ಸ್ಮಾರಕ ನೂತವಾಗಿ ನಿರ್ಮಾಣವಾಗುತ್ತಿರುವ ಮೆಗಾ ಮಾರುಕಟ್ಟೆ, ಪುರಸಭೆ ಕಾರ್ಯಾಲಯದ ಕಟ್ಟಡ ವೀಕ್ಷಿಸಿ ಅವರು ಮಾತನಾಡಿದರು.

ಶರಣರು ಜನ್ಮ ತಾಳಿದ ಸ್ಥಳಗಳಲ್ಲಿ ಜಯಂತಿಗಳನ್ನು ಆಚರಿಸಬೇಕೆಂದು ಸರ್ಕಾರ ಆದೇಶಿಸಿದೆ. ಈ ನಿಟ್ಟಿನಲ್ಲಿ ಬಸವ ಜಯಂತಿ ಕಾರ್ಯಕ್ರಮವನ್ನು ರಾಜ್ಯಮಟ್ಟದ ರೀತಿಯಲ್ಲಿ ಒಂದು ದಿನ ಆದ್ಧೂರಿಯಾಗಿ ಆಚರಿಸಲು ಏ. 27ರಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಬಸವ ಜಯಂತಿ ಆಚರಣೆ ಕುರಿತು ಚರ್ಚಿಸಿ ಆಚರಣೆ ಮಾಡಲು ನಿರ್ಧರಿಸಲಾಗುವುದು ಎಂದು ಹೇಳಿದರು.

ಬಸವ ಜಯಂತ್ಯುತ್ಸವಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಬರುವ ನಿರೀಕ್ಷೆ ಇದೆ. ಪುರಸಭೆ ಕಾರ್ಯಾಲಯ ವಿಶಾಲವಾದ ಜಾಗೆಯಲ್ಲಿ ನಿರ್ಮಾಣಗೊಂಡಿರುವುದು. ಸಂತಸದ ವಿಷಯ ಸರಕಾರಿ ಕಟ್ಟಡಗಳು ಶೀಘ್ರದಲ್ಲಿ ಉದ್ಘಾಟಿಸಲು ಈಗಾಗಲೇ ಅನುಮೋದನೆಗೆ ಕಳುಹಿಸಲಾಗಿದೆ ಎಂದರು.

ಉಪ ವಿಭಾಗಗಾಧಿಕಾರಿ ಬಲರಾಮ ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಡಿ.ನಾಗರಾಜ, ತಹಶೀಲ್ದಾರ್‌ ವಿಜಯಕುಮಾರ ಕಡಕೋಳ, ಕೆಪಿಸಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ರವಿ ರಾಠೊಡ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ ಹಾರಿವಾಳ, ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ, ಅಭಿಯಂತರ ಮಹಾದೇವ ಜಂಬಗಿ, ಆರೋಗ್ಯ ನಿರೀಕ್ಷಕರಾದ ಸಿದ್ಧಾರ್ಥ ಕಳ್ಳಿಮನಿ, ಮಹೇಶ ಹಿರೇಮಠ ಸೇರಿದಂತೆ ಅನೇಕರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next