Advertisement
ಪ್ರಕರಣ ಕುರಿತಂತೆ ಸಾಕಷ್ಟು ದೂರುಗಳು ಬಂದಿರುವ ಹಿನ್ನಲೆಯಲ್ಲಿ ಎಲ್ಲಿ ಲೋಪವಾಗಿದೆ ಎಂಬ ಬಗ್ಗೆ ಸೂಕ್ತ ತನಿಖೆ ನಡೆಸಿ ಒಂದು ವಾರದಲ್ಲಿ ವರದಿ ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ ಪ್ರಸಾದ್‌ಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.
Related Articles
Advertisement
ರಾಜಕೀಯ ಪಕ್ಷಗಳ ಮುಖಂಡರೇ ರಾಜಕೀಯ ಉದ್ದೇಶಕ್ಕಾಗಿ ಮತ ದಾರರ ಹೆಸರುಗಳನ್ನು ತೆಗೆಸಿರುವ ಬಗ್ಗೆ ಸಾರ್ವಜನಿ ಕರು ಆರೋಪಿಸಿದ್ದರೆ. ಜತೆಗೆ, ಪಟ್ಟಿಯಿಂದ ಹೆಸರು ಬಿಟ್ಟುಹೋಗಿರುವ ಮತದಾರರಿಗೆ ಮತ್ತೂಮ್ಮೆ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಪಕ್ಷಗಳಿಗೆ ಮೊದಲೇ ಪಟ್ಟಿ ನೀಡಲಾಗಿತ್ತು: ಯೋಗದ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತಂತೆ “ಉದಯವಾಣಿ’ ಜತೆ ಮಾತನಾಡಿದ ನಗರ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುನಾಥ ಪ್ರಸಾದ್, ಆಯೋಗದಿಂದ ಎರಡು ಮೂರು ಬಾರಿ ಮತದಾರರ ಪಟ್ಟಿ ಪ್ರಕಟಿಸಿದ್ದು, ಎಲ್ಲ ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿಯಿಂದ ತೆಗೆದವರ ವಿವರ ಹಾಗೂ ಅಂತಿಮ ಪಟ್ಟಿ ನೀಡಲಾಗಿತ್ತು. ಆಗ ಯಾವುದೇ ಚಕಾರವೆತ್ತದೆ ಚುನಾವಣೆ ದಿನ ಆರೋಪಿಸಿದರೆ ಯಾವುದೇ ಪ್ರಯೋಜನವಿಲ್ಲ ಎಂದು ಸ್ಪಷ್ಟಪಡಿಸಿದರು.
ಅಧಿಕಾರಿಗಳು ಪ್ರತಿಯೊಂದು ಮನೆಗೆ ಭೇಟಿ ನೀಡಿ ಪರಿಶೀಲಿಸಿದ್ದು, ಅಕ್ಕ-ಪಕ್ಕದವ ರಿಂದ ಮಾಹಿತಿ ಪಡೆದ ನಂತರವೇ ಹೆಸರುಗಳನ್ನು ತೆಗೆದಿದ್ದಾರೆ. ಅದರ ನಂತರವೂ ಪಟ್ಟಿಗೆ ಹೆಸರು ಸೇರಿಸಲು ಸಾಕಷ್ಟು ಕಾಲಾವಕಾಶ ನೀಡಲಾಗಿತ್ತು. ಈ ಸಂದರ್ಭದಲ್ಲಿ ಬಂದ ಸುಮಾರು 2 ಲಕ್ಷ ಅರ್ಜಿಗಳನ್ನು ಮಾನ್ಯ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಚುನಾವಣಾ ಆಯೋಗದಿಂದ 2018ರಲ್ಲಿಯೇ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿತ್ತು. ಆ ನಂತರ ಹಲವು ಬಾರಿ ಪರಿಷ್ಕರಣೆ ಮಾಡಲಾಗಿತ್ತು. ಜ.16ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ ಬಳಿಕ ಯಾವುದೇ ಹೆಸರುಗಳನ್ನು ಪಟ್ಟಿಯಿಂದ ತೆಗೆದಿಲ್ಲ. ಆ ನಂತರವೂ ಪಟ್ಟಿಗೆ ಹೆಸರು ಸೇರಿಸಲು ಅವಕಾಶವಿತ್ತು ಎಂದು ಹೇಳಿದರು.