Advertisement

ರಾಜ್ಯಕ್ಕೆ ಕೇಂದ್ರ  ಚು.ಆಯೋಗ ಭೇಟಿ

06:00 AM Apr 04, 2018 | Team Udayavani |

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಚುನಾವಣಾ ಪೂರ್ವಸಿದ್ಧತೆಗಳ ಪರಿಶೀಲನೆಗೆ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್‌ ರಾವತ್‌ ನೇತೃತ್ವದ ತಂಡ ಮೂರು ದಿನಗಳ ಭೇಟಿಗೆ ಎ.4ರಂದು ಬೆಂಗಳೂರಿಗೆ ಆಗಮಿಸಲಿದೆ. ಮುಖ್ಯ ಚುನಾವಣಾ ಆಯುಕ್ತ ಓಂಪ್ರಕಾಶ್‌ ರಾವತ್‌, ಚುನಾವಣಾ ಆಯುಕ್ತರಾದ ಸುನೀಲ್‌ ಅರೋರಾ ಮತ್ತು ಅಶೋಕ್‌ ಲವಾಸ ಅವರನ್ನು ಒಳ ಗೊಂಡ ತಂಡ ಎ. 4ರಿಂದ 6ರ ವರೆಗೆ ಬೆಂಗಳೂರಿಗೆ ಭೇಟಿ ನೀಡಲಿದೆ. 

Advertisement

ಈ ಅವಧಿಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಸಹಿತ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚುನಾವಣೆಯ ಪೂರ್ವ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಲಿದೆ.

ಅದೇ ರೀತಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೂ ಸಭೆ ನಡೆಸಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್‌ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಓಂಪ್ರಕಾಶ್‌ ರಾವತ್‌ ರಾಜ್ಯಕ್ಕೆ ಎರಡನೇ ಬಾರಿಗೆ ಆಗಮಿಸಲಿದ್ದು, ಈ ಮೊದಲು ಜ.31 ಮತ್ತು ಫೆ.1ರಂದು ಭೇಟಿ ಕೊಟ್ಟಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next