ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಕಷ್ಟ ಕಾಲದಲ್ಲಿ ರಾಜ್ಯದ ನೆರೆ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಮೂಲಕ ಸ್ಪಂದಿಸಬೇಕಿತ್ತು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು.
ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ ಹಾಗೂ ಜಿಲ್ಲೆಯ ಬ್ಯಾಂಕರ್ ಗಳು ಹಮ್ಮಿಕೊಂಡಿದ್ದ ಬ್ಯಾಂಕ್ ಗ್ರಾಹಕರ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದರು.
ರಾಜ್ಯದ ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಉಲ್ಬಣಸಿರುವ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ವಿನ ಅನುದಾನ ನೀಡಿ ಕಷ್ಟ ಕಾಲದಲ್ಲಿ ಸ್ಪಂದಿಸಬೇಕು. ಸದ್ಯಕ್ಕೆ 1200 ಕೋಟಿ ಘೋಷಣೆ ಮಾಡಿದೆ. ಕನಿಷ್ಟ 5 ರಿಂದ 10ಸಾವಿರ ಕೋಟಿ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದರು.