ಬೆಂಗಳೂರು: ಪ್ರಸಕ್ತ ಹಂಗಾಮಿಗೆ ಅನ್ವಯವಾಗುವಂತೆ ಕ್ವಿಂಟಾಲ್‌ಗೆ 11,750 ರೂ. ಬೆಂಬಲ ಬೆಲೆಯಲ್ಲಿ 54,750 ಮೆಟ್ರಿಕ್ ಟನ್ ಉಂಡೆ ಕೊಬ್ಬರಿ ಖರೀದಿಸುವುದಕ್ಕೆ ಕೇಂದ್ರ ಸರಕಾರ ಅನುಮತಿ ನೀಡಿದ್ದು, ಖರೀದಿಗೆ ಸಂಬಂಧಪಟ್ಟಂತೆ ರಾಜ್ಯ ಸರಕಾರ ಮಾರ್ಗಸೂಚಿ ಹೊರಡಿಸಿದೆ.
Advertisement
ಕೊಬ್ಬರಿ ಧಾರಣೆಯು ಮಾರುಕಟ್ಟೆಯಲ್ಲಿ ಈಗ 10,100 ರೂ.ಗಳಿಂದ 11,350 ರೂ.ವರೆಗೆ ಇದೆ.
ಮುಂದಿನ ಆರು ತಿಂಗಳ ಅವಧಿಯಲ್ಲಿ ನಾಪೆಡ್ ಖರೀದಿ ಸಂಸ್ಥೆಯ ಮೂಲಕ ದಕ್ಷಿಣ ಕನ್ನಡ, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರಿನ ಬೆಳೆಗಾರರಿಂದ ಬೆಂಬಲ ಬೆಲೆಯಲ್ಲಿ ಖರೀದಿ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗಿದೆ.