Advertisement

ದೆಹಲಿ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಭಾಗಿ

01:40 AM May 21, 2019 | Team Udayavani |

ಬೆಂಗಳೂರು: ಇವಿಎಂ ದುರ್ಬಳಕೆಯಾಗಿದೆ ಎಂದು ಆರೋಪಿಸಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ದೆಹಲಿಯಲ್ಲಿ ಚುನಾವಣಾ ಆಯೋಗದ ಮುಂದೆ ಮಂಗಳವಾರ ನಡೆಯಲಿರುವ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.

Advertisement

ಪ್ರತಿಭಟನೆಯಲ್ಲಿ ಪಾಲ್ಗೊಂಡ ನಂತರ ಕಾಂಗ್ರೆಸ್‌ ನಾಯಕ ಅಹಮದ್‌ ಪಟೇಲ್ ನೇತೃತ್ವದಲ್ಲಿ ನಡೆಯಲಿರುವ ಎನ್‌ಡಿಎಯೇತರ ಪಕ್ಷಗಳ ಸಭೆಯಲ್ಲೂ ಮುಖ್ಯಮಂತ್ರಿ ಭಾಗಿಯಾಗಲಿದ್ದಾರೆ.

ಲೋಕಸಭೆ ಚುನಾವಣೆ ಫ‌ಲಿತಾಂಶದ ನಂತರ ಅವಕಾಶ ಸಿಕ್ಕರೆ ಪರ್ಯಾಯ ರಂಗ ಸ್ಥಾಪಿಸಿ ಕೇಂದ್ರದಲ್ಲಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಪ್ರಯತ್ನದಲ್ಲಿರುವ ಚಂದ್ರಬಾಬು ನಾಯ್ಡು, ಮಮತಾ ಬ್ಯಾನರ್ಜಿ, ಮಾಯಾವತಿ, ಅಖೀಲೇಶ್‌ ಯಾದವ್‌ ಅವರು ಸಹ ಈ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಫ‌ಲಿತಾಂಶ ಪ್ರಕಟಕ್ಕೆ ಮುನ್ನವೇ ಪ್ರತಿಪಕ್ಷಗಳು ಒಗ್ಗಟ್ಟಾಗುವುದು ಸಭೆಯ ಉದ್ದೇಶ ಎಂದು ಹೇಳಲಾಗಿದೆ.

ಈ ಮಧ್ಯೆ, ಕುಮಾರಸ್ವಾಮಿ ಮತದಾನೋತ್ತರ ಸಮೀಕ್ಷೆಗಳ ಕುರಿತು ತಮ್ಮ ಆಪ್ತರ ಜತೆ ಸಮಾಲೋಚನೆ ನಡೆಸಿದರು. ಜೆಡಿಎಸ್‌ ಮೂರರಿಂದ ನಾಲ್ಕು ಸ್ಥಾನ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿತ್ತಾದರೂ ಸಮೀಕ್ಷೆಗಳಲ್ಲಿ ಎರಡು ಸ್ಥಾನ ಗೆಲ್ಲಬಹುದು ಎಂದು ಹೇಳಲಾಗಿದೆ. ಹೀಗಾಗಿ, ಮುಖ್ಯಮಂತ್ರಿಯವರು ಕೆಲವು ಆಪ್ತ ಸಚಿವರ ಜತೆ ಫ‌ಲಿತಾಂಶದ ಬಗ್ಗೆ ಚರ್ಚೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next