Advertisement

ಚಿಕ್ಕಮಗಳೂರು ನಗರ ಬಂದ್‌ ಸಂಪೂರ್ಣ ಯಶಸ್ವಿ​​​​​​​

03:45 AM Mar 05, 2017 | |

ಚಿಕ್ಕಮಗಳೂರು: ಯಗಚಿ ಜಲಾಶಯದಿಂದ ಹಾಸನದ ಹಾಲುವಾಗಿಲು ಪಿಕಪ್‌ಗೆ ಪ್ರತಿನಿತ್ಯ 20 ಕ್ಯೂಸೆಕ್‌ ನೀರು ಬಿಡುತ್ತಿರುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರೆ ನೀಡಿದ್ದ ಚಿಕ್ಕಮಗಳೂರು ನಗರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

Advertisement

ಶನಿವಾರ ಬೆಳಗಿನಿಂದಲೇ ನಗರದ ವಿವಿಧೆಡೆ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಿದ್ದರು. ಕೆಲವೆಡೆ ತೆರೆದಿದ್ದ ಅಂಗಡಿಗಳನ್ನು ವಿವಿಧ ಸಂಘಟನೆಗಳ ಕಾರ್ಯಕರ್ತರು ಮನವೊಲಿಸಿ ಮುಚ್ಚಿಸಿದರು. ಆಟೋ ಸಂಚಾರ ವಿರಳವಾಗಿತ್ತು. ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತವಾಗಿತ್ತು. ಪೆಟ್ರೋಲ್‌ ಬಂಕ್‌ಗಳು, ಚಲನಚಿತ್ರ ಮಂದಿರಗಳು ಕಾರ್ಯನಿರ್ವಹಿಸಲಿಲ್ಲ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.ಸರ್ಕಾರಿ ಕಚೇರಿಗಳನ್ನು ಪ್ರತಿಭಟನಾಕಾರರು ಮುಚ್ಚಿಸಿದರು. ಪ್ರಯಾಣಿಕರಿಗೆ ಬಂದ್‌ ಪರಿತಪಿಸುವಂತೆ ಮಾಡಿತು.

ಕನ್ನಡಪರ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ನಗರದೆಲ್ಲೆಡೆ ಸಂಚರಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೆಲವರು ನಗರದ ಆಜಾದ್‌ ವೃತ್ತದಲ್ಲಿ ಟೈರ್‌ ಸುಟ್ಟು ಪ್ರತಿಭಟಿಸಿದರೆ ಮತ್ತೆ ಕೆಲವರು ರಸ್ತೆಯಲ್ಲಿ ಉರುಳು ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ಜರುಗದಂತೆ  ಪೊಲೀಸ್‌ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next